ಉಡುಪಿ ಮಾರ್ಚ್ 16: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಪಲ್ಟಿಯಾದ ಘಟನೆ ಕಟಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕಡಪಾಡಿ ಜಂಕ್ಷನ್ ನಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿಗಾಗಿ ರಸ್ತೆಯನ್ನು ಡೈವರ್ಶನ್ ಮಾಡಲಾಗಿತ್ತು. ಈ ತಿರುವಿನಲ್ಲಿ ವೇಗದಿಂದ ಬಂದ ಟ್ಯಾಂಕರ್ ಅನ್ನು ಚಾಲಕ ಒಮ್ಮೆಲೆ ತಿರುಗಿಸಿದ ಪರಿಣಾಮ ಪಲ್ಟಿ ಆಯಿತೆಂದು ತಿಳಿದು ಬಂದಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಇದಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿರುವ ಉಡುಪಿ ಅಗ್ನಿಶಾಮಕ ದಳದ ಮೂರು ವಾಹನಗಳು ಟ್ಯಾಂಕರ್ ಗೆ ನೀರು ಹಾಯಿಸುವ ಮೂಲಕ ತಂಪಾಗಿರಿಸುವ ಪ್ರಯತ್ನ ಮಾಡುತ್ತಿದೆ.
ಅದೇ ರೀತಿ ಇತರ ಟ್ಯಾಂಕರ್ ಗಳ ಮೂಲಕ ನೀರನ್ನು ತಂದು ಹಾಯಿಸಲಾಗುತ್ತಿದೆ. ಸ್ಥಳಕ್ಕೆ ತಜ್ಞರು ಆಗಮಿಸಿ ಟ್ಯಾಂಕರ್ ನಿಂದ ಗ್ಯಾಸ್ ಶಿಫ್ಟ್ ಮಾಡುವ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಥಳದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕದ ಅಧಿಕಾರಿಗಳು ಹಾಜರಿದ್ದಾರೆ. ಇದರಿಂದ ಒಂದು ಗಂಟೆಗಳ ಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು ಒಂದು ಬದಿಯ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಿ ಕಟಪಾಡಿಯ ಒಳಗಿನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.