LATEST NEWS
ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ

ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಮಂಗಳೂರು ಮಾರ್ಚ್ 20: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಗಾಯಗೊಂಡ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ರೀತಿಯ ಗ್ಯಾಸ್ ಸೊರಿಕೆ ಉಂಟಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ರಸ್ತೆ ಸಂಚಾರಕ್ಕೆ ತೊಂದರೆ ಇಲ್ಲ ಎಂಬುದಾಗಿ ಪೋಲೀಸರಿಂದ ಮಾಹಿತಿ ನೀಡಿದ್ದಾರೆ. ಗ್ಯಾಸ್ ಟ್ಯಾಂಕರ್ ನ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Continue Reading