ಕಾಸರಗೋಡು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಕಾಸರಗೋಡು ಅಕ್ಟೋಬರ್ 16: ಕಾಸರಗೋಡು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಒಂದು ಮಗುಚಿ ಬಿದ್ದ ಘಟನೆ ನಡೆದಿದೆ.

ಮಂಗಳೂರು ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಅಡ್ಕತ್ತಬೈಲ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಗ್ಯಾಸ್ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಸ್ಥಳೀಯ ಶಾಲೆಗೆ ರಜೆ ಘೋಷಿಸಿ ಕಾಸರಗೋಡು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈಗಾಗಲೇ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಸೋರಿಕೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಅಪಘಾತ ಹಿನ್ನಲೆ ಕಾಸರಗೋಡು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.

Facebook Comments

comments