Connect with us

    LATEST NEWS

    ಶತಕೋಟಿ ಡಾಲರ್ ಲಂಚದ ಆರೋಪ -ಉದ್ಯಮಿ ಗೌತಮ್ ಅದಾನಿಗೆ ಅರೆಸ್ಟ್ ವಾರೆಂಟ್

    ನ್ಯೂಯಾರ್ಕ್ ನವೆಂಬರ್ 21: ಶತಕೋಟಿ ಡಾಲರ್ ಲಂಚ ಮತ್ತು ವಂಚನೆ ಆರೋಪದ ಮೇಲೆ ಭಾರತದ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.


    ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ₹2,237 ಕೋಟಿ ಲಂಚದ ಆರೋಪದಲ್ಲಿ ಗೌತಮ್ ಅದಾನಿ, ಸಾಗರ್ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್ ವಿರುದ್ಧ ಐದು ಅಂಶಗಳ ಕ್ರಿಮಿನಲ್ ಆರೋಪಪಟ್ಟಿಯನ್ನು ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯಕ್ಕೆ ಅಮೆರಿಕದ ಪ್ರಾಸಿಕ್ಯೂಟ‌ರ್ ಸಲ್ಲಿಸಿದ್ದರು. ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್​ಗೂ ಅಧಿಕ ಮೊತ್ತದಷ್ಟು ಲಂಚ ನೀಡಲಾಗಿದೆ ಎಂಬುದು ಆರೋಪ. 2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ.

     

    ಅಮೆರಿಕಲ್ಲಿ ಕೋರ್ಟ್​ನಲ್ಲಿ ಗೌತಮ್ ಅದಾನಿ ಮತ್ತಿತರರ ವಿರುದ್ಧ ಆರೋಪಗಳು ದಾಖಲಾದ ಬೆನ್ನಲ್ಲೇ ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ತನ್ನ 600 ಮಿಲಿಯನ್ ಯುಎಸ್ ಡಾಲರ್ ಬಾಂಡ್​ಗಳ ವಿತರಣೆಯ ಯೋಜನೆಯನ್ನು ಕೈಬಿಟ್ಟಿದೆ. ಈ ಬಾಂಡ್​ಗಳಿಗೆ ಸಾಕಷ್ಟು ಹೂಡಿಕೆದಾರರು ಅರ್ಜಿ ಹಾಕಿದ್ದರು. ಕೋರ್ಟ್​ನಲ್ಲಿ ಪ್ರಕರಣ ಬರುತ್ತಲ್ಲೇ ಸಂಸ್ಥೆ ತನ್ನ ನಡೆಯನ್ನು ಹಿಂಪಡೆದುಕೊಂಡಿದೆ. ಇದೇ ವೇಳೆ, ಅದಾನಿ ಗ್ರೂಪ್​ನ ಬಹುತೇಕ ಎಲ್ಲಾ ಸ್ಟಾಕ್​ಗಳೂ ಇಂದು ಗುರುವಾರ ನೆಲಕಚ್ಚಿವೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *