LATEST NEWS
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಗೀತಾ ಶಿವರಾಜ್ ಕುಮಾರ್

ಉಡುಪಿ ಮಾರ್ಚ್ 21: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಗೀತಾಶಿವರಾಜ್ ಕುಮಾರ್ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಮಾಜಿ ಸಿಎಂ ಬಂಗಾರಪ್ಪನವರ ಪುತ್ರಿ, ಡಾ ರಾಜ್ಕುಮಾರ್ ಸೊಸೆ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದು ಈಗಾಗಲೇ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಈ ನಡುವೆ ಬೈಂದೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಅವರು , ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಬಳಿಕ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಗೀತಾ ಅವರ ಜೊತೆ ನಟ ಶಿವರಾಜ್ ಕುಮಾರ್ ಆಗಮಿಸಿದ್ದು, ಅವರಿಗೆ ದೇವಳದ ವತಿಯಿಂದ ವಿಶೇಷ ಗೌರವ ಅರ್ಪಿಸಲಾಯಿತು.

ಈ ವೇಳೆ ಸಚಿವ ಮಧುಬಂಗಾರಪ್ಪ ಮಾಜಿ ಶಾಸಕರಾದ ಗೋಪಾಲ್ ಪೂಜಾರಿ- ಬಿ.ಎಂ ಸುಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.