LATEST NEWS
ಮಂಗಳೂರು – ಜೆನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಗೆ ಪ್ರಸಾವನೆ ಸಲ್ಲಿಸುವಂತೆ ಡಿಸಿಗೆ ಸೂಚನೆ
ಮಂಗಳೂರು ಡಿಸೆಂಬರ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ರೂಪಾಂತರಿ ಪ್ರಕರಣ ಓಮಿಕ್ರಾನ್ ಪತ್ತೆಯಾದ ಬೆನ್ನಲ್ಲೇ ಇದೀಗ ವೈರಸ್ ಪತ್ತೆ ಹಚ್ಚುವ ಜೆನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಬೇಕಾಗುವ ಅಗತ್ಯತೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರಿಗೆ ಸೂಚಿಸಿದೆ.
ಓಮಿಕ್ರಾನ್ ಕೊರೊನಾ ಪ್ರಕರಣಗಳ ಪತ್ತೆಯಾದ ಹಿನ್ನಲೆ ಜಿಲ್ಲೆಗೆ ಜೆನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಅಗತ್ಯತೆ ಬಗ್ಗೆ ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈಗಾಗಲೇ ಪತ್ತೆಯಾದ ಕೊರೊನಾ ಪ್ರಕರಣಗಳ ಜೆನೋಮ್ ಸೀಕ್ವೆನ್ಸಿಂಗ್ ಗಾಗಿ 120 ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಿದ್ದರೂ ಕೇವಲ 34ರ ಫಲಿತಾಂಶ ಮಾತ್ರ ಬಂದಿದೆ. ಉಳಿದ 86 ಮಾದರಿಗಳ ಫಲಿತಾಂಶವನ್ನು ಜಿಲ್ಲಾಡಳಿತ ನಿರೀಕ್ಷಿಸುತ್ತಿದೆ. ಗುರುವಾರದ ವರೆಗೆ ಜಿಲ್ಲೆಯಲ್ಲಿ ಏಳು ಒಮೈಕ್ರಾನ್ ಪ್ರಬೇಧದ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ . ಜಿಲ್ಲೆಯಲ್ಲಿ ಜೆನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಆರಂಭಿಸುವ ಬಗ್ಗೆ ಒಂದೆರಡು ದಿನಗಳಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.