ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮಜಾಭಾರತ, ಗಿಚ್ಚಿ-ಗಿಲಿಗಿಲಿ ಶೋ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದಿರುವ ಹಾಸ್ಯ ನಟ ಚಿಲ್ಲರ್ ಮಂಜು(ಮಂಜುನಾಥ್) ಗುರುವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಗಿಚ್ಚಿ ಗಿಲಿ ಗಿಲಿ ಖ್ಯಾತಿಯ ಮತ್ತೊಬ್ಬ ಹಾಸ್ಯ ನಟ ಶಿವು ಹಾಗೂ ಮಾನಸ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಚಿಲ್ಲರ್ ಮಂಜು ಅವರು ಸಹ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.
ಇಂದು ಕುಟುಂಬಸ್ಥರ ಸಮ್ಮುಖದಲ್ಲಿ ಚಿಲ್ಲರ್ ಮಂಜು ಅವರು ಕಾರುಣ್ಯ ಎಂಬ ಹುಡುಗಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಂಜು ಅವರು ಈ ಸಮಾರಂಭದ ಫೋಟೋಗಳನ್ನು ತಮ್ಮ ಇನ್ಸ್ ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.



