Connect with us

    LATEST NEWS

    Bridgeman of india ಗಿರೀಶ್ ಭಾರಧ್ವಜ್ ಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

    ಕುಂದಾಪುರ ಸೆಪ್ಟೆಂಬರ್ 23: ಈ ಬಾರಿಯ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ತೂಗು ಸೇತುವೆಯ ಹರಿಕಾರ ಗಿರೀಶ್ ಭಾರಧ್ವಜ್ ಅವರು ಆಯ್ಕೆಯಾಗಿದ್ದಾರೆ. ಕೋಟತಟ್ಟು ಗ್ರಾಮ ಪಂಚಾಯತ್ ಕೋಟ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ದ ಸಹಭಾಗಿತ್ವದಲ್ಲಿ ಕಳೆದ ಹದಿನಾರು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ.


    ಸೇತುಬಂಧು ಎಂದೇ ಕರೆಯಲ್ಪಡುವ ಗಿರೀಶ್ ಭಾರದ್ವಾಜ್ ಗ್ರಾಮೀಣ ಪ್ರದೇಶದ ಜನರ ಜೀವನದಲ್ಲಿ ಹೊಸ ಬೆಳಕು ಮೂಡಿಸುವಂತೆ 130 ತೂಗು ಸೇತುವೆ ನಿರ್ಮಾಣ ಮಾಡಿದವರು. ಅಲ್ಲದೇ ಸಮಾಜ ಸೇವೆಯಲ್ಲೂ ಕ್ರೀಯಾಶೀಲರಾದವರು. ಇವರ ಸಾಧನೆಯನ್ನು ಪರಿಗಣಿಸಿ ಭಾರತ ಸರಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.


    ಅಕ್ಟೋಬರ್ ಹತ್ತರಂದು ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ. ಈ ಬಾರಿ ಕಾರಂತ ಜನ್ಮ ದಿನೋತ್ಸವದ ಅಂಗವಾಗಿ ಅಕ್ಟೋಬರ್ ಒಂದರಿಂದ ಹತ್ತರವರೆಗೆ ಹತ್ತು ದಿನಗಳ ಸಾಂಸ್ಕೃತಿಕ- ಸಾಹಿತ್ಯಿಕ ಸುಗ್ಗಿ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾಗಿದೆ. ಕಾರಂತ ಚಿಂತನ,-ನೃತ್ಯ ಪ್ರದರ್ಶನ, ಸಂಗೀತ ಸುಧೆ-ಯಕ್ಷ-ನಾಟ್ಯ-ವೈಭವ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಕಾರಂತ ಥೀಮ್ ಪಾರ್ಕ್ ಯುಟ್ಯೂಬ್ ಹಾಗೂ ಪೇಸ್ ಬುಕ್ ಪೇಜ್ ನಲ್ಲಿ ಪ್ರಸಾರಗೊಳ್ಳಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply