ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಂಗಳೂರು ನವೆಂಬರ್ 27: ಕಡಬದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನೂಜಿಬಾಳ್ತಿಲ ಗ್ರಾಮದ ಹರಿಮಜಲು ನಿವಾಸಿ ಸವಿತಾ ಎಂದು ಗುರುತಿಸಲಾಗಿದೆ. ಮಂಗಳವಾರು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ ಸವಿತಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

comments