LATEST NEWS
ಉಡುಪಿ – ಮನೆಯಿಂದ ಹೊರಗೆ ಹೋದ ಯುವತಿ ನಾಪತ್ತೆ …!!
ಉಡುಪಿ, ಏಪ್ರಿಲ್ 11 : ಉಡುಪಿ ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀ ಲಕ್ಷ್ಮೀ (19) ಎಂಬ ಯುವತಿ ನಾಪತ್ತೆಯಾಗಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀಲಕ್ಷ್ಮೀ ಏಪ್ರಿಲ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
You must be logged in to post a comment Login