BELTHANGADI
21 ವರ್ಷದ ಯುವತಿ ನಾಪತ್ತೆ – ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಬೆಳ್ತಂಗಡಿ ಅಕ್ಟೋಬರ್ 28: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಆರೈಕೆಯಲ್ಲಿ 21 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾಣೆಯಾದ ಯುವತಿಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಮ ಎಂಬುವವರ ಪುತ್ರಿ ರೇಣುಕಾ ಎಂದು ಗುರುತಿಸಲಾಗಿದೆ.
ರೇಣುಕಾ ಒಂದು ವರ್ಷದಿಂದ ನಗರದ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಾಯಿಯನ್ನು ನೋಡಿಕೊಳ್ಳಲು ಕಳೆದ ಮೂರು ತಿಂಗಳಿಂದ ಮನೆಯಲ್ಲೇ ಇದ್ದಳು. ಇನ್ನು ಅಕ್ಟೋಬರ್ 25 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನಾಪತ್ತೆಯಾಗಿದ್ದಳು. ಆಕೆ ಮೊಬೈಲ್‌ಗೆ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಹೀಗಾಗಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.