Connect with us

KARNATAKA

ಮಸೀದಿ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ

ಚಿಕ್ಕಬಳ್ಳಾಪುರ, ಜೂನ್ 03: ಆರು ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ಚಿಕ್ಕಬಳ್ಳಾಪುರ  ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಸಿದ್ದು, ಅವರು ನೀಡಿದ ದೂರಿನ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಮಹಪ್ಯೂಸ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯು ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯ ತಂದೆಯಾಗಿದ್ದಾನೆ.

ಆರೋಪಿಯ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದುದರಿಂದ ಮೌಲ್ವಿಯ ಆಶ್ರಯಕ್ಕೆ ಮಸೀದಿಯ ಕೊಠಡಿಯನ್ನು ಜಮಾತ್ ನೀಡಿತ್ತು. ಅದೇ ಕೊಠಡಿಯನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ. ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಮಹಪ್ಯೂಸ್ ಮೂಲತಃ ಉತ್ತರ ಪ್ರದೇಶ ಮೂಲದವನಾಗಿದ್ದಾನೆ. 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ಬಂದು ವಾಸ್ತವ್ಯ ಹೂಡಿದ್ದ. ಬೀದಿ ಬದಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದಾನೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮಸೀದಿಯ ಮೌಲ್ವಿ ಸುಹೇಬ್​​ನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮೌಲ್ವಿಯ ಆಶ್ರಯಕ್ಕೆಂದು ಪಡೆದ ಕೊಠಡಿಯನ್ನು ತಂದೆಗೆ ಯಾಕೆ ನೀಡಿದ್ದು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೊಂದೆಡೆ, ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ ಎನ್ನಲಾಗಿದೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *