Connect with us

    KARNATAKA

    ಮದುವೆ ಮಾಡಿಸಿದ್ದಕ್ಕೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ

    ಕುಣಿಗಲ್ ಡಿಸೆಂಬರ್ 22 : ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಎಡೆಯೂರು ವ್ಯಾಪ್ತಿಯ ಶಿಡ್ಲನಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕುಣಿಗಲ್ ಪಟ್ಟಣದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಕ್ಷಿತ (19) ಎಂದು ಗುರುತಿಸಲಾಗಿದೆ.


    ಕಳೆದ ಇಪ್ಪತ್ತು ದಿನಗಳ ಹಿಂದಷ್ಟೆ ತಾಯಿಯ ತಮ್ಮ (ಸೋದರ ಮಾವನೊಂದಿಗೆ) ಕುಟುಂಬಸ್ಥರು ಒಪ್ಪಿ ಮದುವೆ ಮಾಡಿಕೊಡಲಾಗಿತ್ತು. ಮದುವೆ ಬಳಿಕ ಯುವತಿಯನ್ನು ಕಾಲೇಜು ಬಿಡಿಸಿದ್ದರು ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾರಣದಿಂದ ಖಿನ್ನತೆಗೆ ಒಳಗಾಗಿದ್ದ ಯುವತಿ ರಕ್ಷಿತ ಕೆರೆಗೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಮೃತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply