Connect with us

LATEST NEWS

ಮಾನಸಿಕ ಖಿನ್ನತೆಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ

ಕಾಪು ಜುಲೈ 01: ಮಾನಸಿಕ ಖಿನ್ನತೆಗೆ ಯುವತಿಯೊಬ್ಬಳು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಪು ತಾಲೂಕಿನ ಮಡಂಬು ಎಂಬಲ್ಲಿ ನಡೆದಿದೆ.  ಮಡುಂಬು ಗೋಪಾಲ್ ಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಮೃತ ಯುವತಿ. ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಊರಿಗೆ ಬಂದ್ದ ಶರ್ಮಿಳಾ ಮನೆ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು.


ಬೆಂಗಳೂರಿನ ಸಾಪ್ಟವೇರ್ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಶರ್ಮಿಳಾ ಒಂದು ವಾರದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಆಕೆಯ ಸಹೋದ್ಯೋಗಿಗಳು ತಿಳಿಸಿದ್ದಾರೆ. ಶರ್ಮಿಳಾಳು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Click to comment

You must be logged in to post a comment Login

Leave a Reply