KARNATAKA
ವಿವಾಹವಾದ ಐದೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು….!!
ಶಿವಮೊಗ್ಗ ನವೆಂಬರ್ 6: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ಈಕೆ 5 ತಿಂಗಳ ಹಿಂದೆ ಖ್ಯಾತ ವೈದ್ಯೆ ಡಾ. ಜಯಶ್ರೀ ಹೊಮ್ಮರಡಿ ಅವರ ಮಗ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿದ್ದಳು.
ನಿನ್ನೆ ರಾತ್ರಿ ನವ್ಯಶ್ರೀ ತುಳಸಿ ಪೂಜೆ ಮಾಡಿ, ಅರಿಶಿನ, ಕುಂಕುಮ ಸ್ವೀಕರಿಸಿ ಬಂದಿದ್ದಳು. ಬಳಿಕ ಕಾರ್ ಶೆಡ್‍ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನವ್ಯಶ್ರೀಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಘಟನೆಯ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.