Connect with us

LATEST NEWS

ಹೆಣ್ಣು ಮಕ್ಕಳು ತಮಗಿರುವ ಕಾನೂನುಗಳ ಕುರಿತು ಅರಿವು ಹೊಂದಬೇಕು : ನ್ಯಾ. ಶಾಂತವೀರ ಶಿವಪ್ಪ

ಉಡುಪಿ, ಅಕ್ಟೋಬರ್ 12 : ಸರಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಅನೇಕ ಕಾನೂನು ರೂಪಿಸಿ, ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಹೆಣ್ಣು ಮಕ್ಕಳು ಅರಿವು ಹೊಂದುವುದರೊAದಿಗೆ ಅವುಗಳ ಉಪಯುಕ್ತತೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ ಹೇಳಿದರು.


ಅವರು ಇಂದು ಕಲ್ಯಾಣಪುರ ಸಂತೆಕಟ್ಟೆಯ ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್ ಇಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಇಲಾಖೆ, ರೋಟರಿ, ಚೈಲ್ಡ್ಲೈನ್ 1098 ಉಡುಪಿ ಮತ್ತು ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್ ಸಂತೆಕಟ್ಟೆ ಕಲ್ಯಾಣಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗೌರವಯುತವಾದ ಸ್ಥಾನವಿದೆ. ಇವುಗಳ ಜೊತೆಗೆ ಅವರ ರಕ್ಷಣೆಗೆ ಹುಟ್ಟಿನಿಂದ ಕೊನೆಯ ವರೆಗೆ ರಕ್ಷಿಸಲು ಅನೇಕ ಕಾನೂನುಗಳನ್ನು ಹೆಣ್ಣು ಮಕ್ಕಳಿಗಾಗಿಯೇ ತಂದಿದೆ. ಪ್ರಸವ ಪೂರ್ವದಲ್ಲಿ ಭ್ರೂಣ ಹತ್ಯೆ ತಡೆಯಲು ಭ್ರೂಣ ಹತ್ಯೆ ನಿಷೇಧ ಕಾನೂನನ್ನು ಸಹ ಸರಕಾರ ಜಾರಿಕೆ ತಂದಿರುವುದನ್ನು ನಾವು ಕಾಣುತ್ತಿದ್ದೇವೆ ಎಂದರು. ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಸ್ವಂತ ಉದ್ಯೋಗ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಭಿಗಳಾಗಬೇಕು ಎಂದ ಅವರು ವೀರರಾಣಿ ಕಿತ್ತೂರು ಚೆನ್ಮöಮ್ಮ, ರಾಣಿ ಅಬ್ಬಕ್ಕ ಸೇರಿದಂತೆ ಮತ್ತಿತರ ವೀರ ವನಿತೆಯರ ಧೈರ್ಯ ಸಾಹಸ ಪ್ರವೃತ್ತಿಯನ್ನು ಪ್ರತಿಯೊಬ್ಬ ಹೆಣ್ಣುಮಕ್ಕಳು ರೂಢಿಸಿಕೊಳ್ಳಬೇಕು ಎಂದರು.

ಪೊಲೀಸ್ ಅಧೀಕ್ಷಕರಾದ ಹಾಕೆ ಅಕ್ಷಯ್ ಮಚ್ಚೀಂದ್ರ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ವಿದ್ಯಾವಂತರಾಗುವುದರ ಜೊತೆಗೆ ವಿಶ್ವದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದು, ಪುರುಷರಿಗಿಂತ ಕಡಿಮೆ ಇಲ್ಲ ಎಂದು ಸಾಧಿಸಿ ತೋರಿಸಿದ್ದಾರೆ. ದುರ್ಬಲರೆನಿಸಿದ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು ಶೇ. 90 ರಷ್ಟು ಈಗಾಗಲೇ ಕಡಿಮೆಯಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಹೆಣ್ಣು ಮಕ್ಕಳ ಮೇಲೆ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಈ ಬಗ್ಗೆ ಹೆಣ್ಣುಮಕ್ಕಳು ಹಾಗೂ ಪೋಷಕರು ಜಾಗೃತರಾಗಿರಬೇಕು ಎಂದರು.

ಹೆಣ್ಣುಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ನಾವು ಯಾರಿಗಿಂತ ಕಡಿಮೆ ಇಲ್ಲ ಎಂಬ ಬಗ್ಗೆ ಮನೋಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಬಳಕೆಯೊಂದಿಗೆ ನೆಟ್ ಬ್ಯಾಂಕಿನಲ್ಲಿ ಹಣವನ್ನು ಲಪಟಾಯಿಸುವುದು ಸೇರಿದಂತೆ ವೈಯಕ್ತಿಕ ಮಾಹಿತಿಗಳನ್ನು ಹ್ಯಾಕ್ ಮಾಡುವ ಸಾಧ್ಯತೆಗಳಿರುತ್ತವೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಮೂಢನಂಬಿಕೆಗಳಿAದ ದೂರವಿರಬೇಕು. ಇತ್ತೀಚಿನ ದಿನಗಳಲ್ಲಿ ಗಂಡು ಹೆಣ್ಣಿನ ಅನುಪಾತ ಹೆಚ್ಚುತ್ತಿದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *