Connect with us

    LATEST NEWS

    ಮಾಹಿತಿ ಹಕ್ಕು ಅರ್ಜಿದಾರರಿಗೆ ಸಕಾಲದಲ್ಲಿ ಮಾಹಿತಿ ನೀಡಿ : ಚಂದ್ರೇಗೌಡ

    ಮಾಹಿತಿ ಹಕ್ಕು ಅರ್ಜಿದಾರರಿಗೆ ಸಕಾಲದಲ್ಲಿ ಮಾಹಿತಿ ನೀಡಿ : ಚಂದ್ರೇಗೌಡ

    ಉಡುಪಿ ಜೂನ್ 6 : ಮಾಹಿತಿ ಹಕ್ಕು ನಿಯಮದಡಿಯಲ್ಲಿ ಮಾಹಿತಿ ಕೋರಿ ಸಲ್ಲಿಸುವ ಅರ್ಜಿದಾರರಿಗೆ, ಅಧಿಕಾರಿಗಳು ಸಕಾಲದಲ್ಲಿ ತಮ್ಮಲ್ಲಿರುವ ಮಾಹಿತಿ ನೀಡುವಂತೆ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತ ಕೆ.ಎಂ. ಚಂದ್ರೇಗೌಡ ಹೇಳಿದ್ದರೆ.

    ಅವರು ಬುಧವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಉಡುಪಿ ಜಿಲ್ಲೆಗೆ ಸಂಬOಧಿಸಿದಂತೆ ಮಾಹಿತಿ ಆಯೋಗದಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ಹಾಗೂ ಮಾಹಿತಿ ಹಕ್ಕು ಅಧಿ ನಿಯಮ 2005 ರ ಕಾಯ್ದೆಗೆ ಸಂಬಂದಿಸಿದಂತೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ತಮ್ಮಲ್ಲಿನ ಮಾಹಿತಿಯನ್ನು ನಿಗಧಿತ ಅವಧಿಯೊಳಗೆ ನೀಡಿ, ತಮ್ಮಲ್ಲಿ ಮಾಹಿತಿ ಇಲ್ಲವಾದಲ್ಲಿ ಸಂಬಂದಪಟ್ಟ ಇತರೆ ಪ್ರಾದಿಕಾರಕ್ಕೆ ಕಾಲ ಮಿತಿಯೊಳಗೆ ವರ್ಗಾಯಿಸಿ, ಅರ್ಜಿದಾರರಿಗೆ ಅನಗತ್ಯವಾಗಿ ವಿಳಂಬ ಮಾಡಬೇಡಿ ಎಂದು ಚಂದ್ರೇಗೌಡ ಹೇಳಿದರು.

    ರಾಜ್ಯ ಮಾಹಿತಿ ಆಯೋಗದಲ್ಲಿ ಉಡುಪಿ ಜಿಲ್ಲೆಗೆ ಸಂಬಂದಿಸಿದಂತೆ 71 ಪ್ರಕರಣಗಳು ವಿಚಾರಣೆಗೆ ದಾಖಲಾಗಿದ್ದು, ಆ ಪ್ರಕರಣಗಳಲ್ಲಿ ಸುಮಾರು 50 ಕ್ಕೂ ಹೆಚ್ಚು ಅರ್ಜಿಗಳನ್ನು, ಅರ್ಜಿದಾರರ ಸಮ್ಮುಖದಲ್ಲೇ ಇತ್ಯರ್ಥಪಡಿಸಿದ ಮಾಹಿತಿ ಆಯುಕ್ತರು, ಉಳಿದ ಪ್ರಕರಣಗಳ ವಿಚಾರಣೆಗೆ ಮುಂದಿನ ದಿನಾಂಕ ನಿಗಧಿ ಮಾಡಿದರು.

    ಮಾಹಿತಿ ಹಕ್ಕು ಅಧಿ ನಿಯಮ 2005 ರ ಕಾಯ್ದೆಗೆ ಸಂಬಂದಿಸಿದಂತೆ, ಜಿಲ್ಲೆಯ ಎಲ್ಲಾ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡುವುದರ ಜೊತೆಗೆ, ಅಧಿಕಾರಿಗಳಲ್ಲಿದ್ದ ಗೊಂದಲಗಳಿಗೆ ಸೂಕ್ತ ಮಾಹಿತಿ ಹಾಗೂ ಸಲಹೆ ಸೂಚನೆಗಳ್ನು ಆಯುಕ್ತರು ನೀಡಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಮಾಹಿತಿ ಹಕ್ಕು ಕಾಯ್ದೆ ಕುರಿತಂತೆ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಸಂಪೂರ್ಣವಾಗಿ ಅರಿತಿರಬೇಕು, ಮಾಹಿತಿ ಹಕ್ಕು ಅರ್ಜಿಗಳನ್ನು ಪರಿಶೀಲಿಸಿ, ಅರ್ಜಿದಾರರಿಗೆ ನಿಗಧಿತ ಅವಧಿಯೊಳಗೆ ಮಾಹಿತಿ ನೀಡಿ, ಮೇಲ್ಮನವಿ ಪ್ರಾಧಿಕಾರಗಳ ಬಳಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ತಲುಪುವುದನ್ನು ತಡೆಯಲು ನಿಮ್ಮ ಹಂತದಲ್ಲಿಯೇ ಮಾಹಿತಿ ನೀಡಿ, ಒಂದು ವಾರದ ಒಳಗೆ ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ಮಾಹಿತಿ ಹಕ್ಕು ನಿಯಮದ ಕುರಿತು ವಿವರಗಳನ್ನು ಕಚೇರಿಯ ಸೂಚನಾ ಫಲಕದಲ್ಲಿ ಅಳವಡಿಸಿ , ಅರ್ಜಿಗಳನ್ನು ಸ್ವೀಕರಿಸಲು ಪ್ರತ್ಯೆಕ ರಿಜಿಸ್ಟ್ರಾರ್ ಗಳನ್ನು ಇಟ್ಟು , ಜಿಲ್ಲಾಧಿಕಾರಿ ಕಚೇರಿಗೆ ವರದಿ ಸಲ್ಲಿಸುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply