KARNATAKA
ಆಂಟಿಯನ್ನು ಪ್ರೀತಿಸಲು ಹೋಗಿ ಯುವಕನ ಬಿತ್ತು ಹೆಣ..!
ಬೆಂಗಳೂರು: ಆನೇಕಲ್ ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು ಪ್ರಕರಣಕ್ಕೆ ಹಿಂದೆ ಬಿದ್ದ ಖಾಕಿ ಪಡೆ್ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆಂಟಿಯ ಪ್ರೀತಿಸಲು ಹೋಗಿ ಯುವಕ ಹೆಣವಾಗಿ ಹೋಗಿದ್ದಾನೆ..
ಈ ಕೇಸ್ನಲ್ಲಿ ಮೃತನ ಪ್ರೇಯಸಿಯೇ ಆತನನ್ನು ಕೊಂದಿರುವ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮುಗಳೂರು ಹೊಳೆಯಲ್ಲಿ ಅನಾಮಿಕ ವ್ಯಕ್ತಿಯ ಶವ ಸಿಕ್ಕಿದ್ದು, ಈ ಪ್ರಕರಣ ಆಸುಪಾಸಿನ ಜನರನ್ನು ಆತಂಕಕ್ಕೀಡು ಮಾಡಿತ್ತು. ಆದರೀಗ ಪೊಲೀಸರು ಈ ಪ್ರಕರಣವನ್ನು ಬೇಧಿಸಿದ್ದು, ಮೃತ ಯುವಕನನ್ನು ಕೋಲಾರ ಮಾಲೂರು ತಾಲೂಕಿನ ಅಯ್ಯಪ್ಪನಗರದ 28 ವರ್ಷದ ಚೇತನ್ ಎಂದು ಗುರುತಿಸಲಾಗಿದೆ. ಮಾಲೂರು ಸೊನ್ನಾಪುರ ಗ್ರಾಮದ ಸತೀಶ್(30), ಶಶಿ(29), ಶೋಭಾ(28) ಕೊಲೆ ಆರೋಪಿಗಳಾಗಿದ್ದಾರೆ.
ಕಳೆದ ತಿಂಗಳು 26ನೇ ತಾರೀಖು ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಯುವಕನ ಶವ ಪತ್ತೆಯಾಗಿತ್ತು. ಈ ವೇಳೆ ಸಮೀಪದ ಮುಗಳೂರು ಬ್ರಿಡ್ಜ್ ತಡೆಗೋಡೆ ಮೇಲೆ ರಕ್ತದ ಕಲೆಗಳಿರುವುದು ಪತ್ತೆಯಾಗಿತ್ತು. ಆದ್ರೆ ಅಂದು ಮೃತನ ಗುರುತು ಪತ್ತೆಯಾಗಿರಲಿಲ್ಲ. ಸರ್ಜಾಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಇದಾದ ಬಳಿಕವೇ ಯುವಕನ ಮರ್ಡರ್ ಕಹಾನಿ ಬಯಲಿಗೆ ಬಂದಿದೆ.
ಮೃತ ಚೇತನ್ ಗಂಡ ಬಿಟ್ಟಿದ್ದ ಮಹಿಳೆ ಜೊತೆ ಸಹಜೀವನ ಆರಂಭಿಸಿದ್ದು, ಕಳೆದ ಎಂಟು ತಿಂಗಳಿಂದ ಇಬ್ಬರೂ ಒಟ್ಟಿಗಿದ್ದರೆನ್ನಲಾಗಿದೆ. ಈ ನಡುವೆ ಚೇತನ್ ಮೂಲಕ ಸತೀಶ್ ಪರಿಚಯವಾಗಿದ್ದು, ಸಿರಿವಂತ ಸತೀಶ್ ಮೇಲೆ ಶೋಭಾ ಕಣ್ಣು ಬಿದ್ದಿದೆ. ಕೆಲವೇ ದಿನಗಳಲ್ಲಿ ಶೋಭಾಗಾಗಿ ಆತ ಲಕ್ಷ ಲಕ್ಷ ಖರ್ಚು ಮಾಡಿದ್ದ. 25 ಲಕ್ಷ ಖರ್ಚು ಮಾಡಿದ್ದ ಆತ ಶೋಭಗಾಗಿ ಬ್ಯೂಟಿ ಪಾರ್ಲರ್ ಆರಂಭ ಮಾಡಿದ್ದ. ಆದರೆ ಇಬ್ಬರ ನಡುವಿನ ಈ ಆಪ್ತತೆಗೆ ಚೇತನ್ ಅಡ್ಡಿಯಾಗಿದ್ದ.
ತಮ್ಮ ಈ ಸಂಬಂಧಕ್ಕೆ ಅಡ್ಡಿಯಾದ ಚೇತನ್ ಆಟ ಮುಗಿಸಲು ಶೋಭಾ ಪ್ಲಾನ್ ಮಾಡಿದ್ದಾಳೆ. ನಂತರ ಒಂದು ದಿನ ಎಣ್ಣೆ ಪಾರ್ಟಿ ನಡೆದಿದೆ. ಹೊಸಕೋಟೆ ಐಶ್ವರ್ಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮುಗಿಸಿ ಮಧ್ಯರಾತ್ರಿ 2 ಗಂಟೆಗೆ ಚೇತನ್‍ನನ್ನು ಮಚ್ಚಿನಿಂದ ಹೊಡೆದು ಮುಗಳೂರು ಹೊಳೆಗೆ ಎಸೆದಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.ಈ ಹಿಂದೆ ಅತ್ತಿಬೆಲೆ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಆರೋಪಿ ಶೋಭಾ, ಈ ಬಾರಿ ತನ್ನ ಮಾಸ್ಟರ್ ಪ್ಲಾನ್ ನಿಂದಾಗಿ ಇಬ್ಬರ ಭವಿಷ್ಯ ಹಾಳು ಮಾಡಿದ್ದಾಳೆ. ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login