Connect with us

LATEST NEWS

ಸರಳ ಸಜ್ಜನಿಕೆ ರಾಜಕಾರಣಿ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ನಿಧನ

ಸರಳ ಸಜ್ಜನಿಕೆ ರಾಜಕಾರಣಿ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ನಿಧನ

ಮಂಗಳೂರು ಮಾರ್ಚ್ 17: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮಾಜಿ ರಕ್ಷಣಾ ಸಚಿವ ಮನೋಹರ್ ಪಾರಿಕರ್ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಗೋವಾದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 63 ವರ್ಷ ವಯಸ್ಸಾಗಿತ್ತು.
ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದರು. ಅಲ್ಲದೇ ಕಳೆದ ವರ್ಷ ಅಮೆರಿಕದಲ್ಲಿ 3 ತಿಂಗಳ ಕಾಲ ಚಿಕಿತ್ಸೆ ಪಡೆದಿದ್ದ ಅವರು ಸೆಪ್ಟೆಂಬರ್ 6 ರಂದು ಚೇತರಿಸಿಕೊಂಡು ಮತ್ತೆ ತಾಯ್ನಾಡಿಗೆ ಮರಳಿದ್ದರು.

2018ರ ಅಕ್ಟೋಬರ್‌ 14ರಂದು ಗೋವಾಗೆ ಮರಳಿ ಖಾಸಗಿ ನಿವಾಸದಿಂದಲೇ ರಾಜ್ಯದ ಆಡಳಿತ ನಡೆಸಿದ್ದರು. 2019ರ ಜನವರಿ 2ರಂದು ಮುಖ್ಯಮಂತ್ರಿ ಕಚೇರಿಗೆ ಹಾಜರಾಗುವ ಮೂಲಕ ಎಲ್ಲರನ್ನೂ ನಿಬ್ಬೆರಗಾಗಿಸಿದ್ದರು ಅಲ್ಲದೆ ಜನವರಿ 29ರಂದು ಬಜೆಟ್‌ ಅಧಿವೇಶದಲ್ಲಿ ಭಾಗಿಯಾಗಿ, ಜನವರಿ 30ರಂದು ರಾಜ್ಯ ಬಜೆಟ್‌ ಮಂಡಿಸಿದ್ದರು.

ಬಿಜೆಪಿ ಪಾಳೆಯದಲ್ಲಿ ಬುದ್ದಿವಂತ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದರು. 1994 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಗಿ ಆಯ್ಕೆ ಆಗಿದ್ದ ಅವರು, 2000 ಇಸವಿಯಿಂದ 2005 ಹಾಗೂ 2012 ರಿಂದ 2014ರ ವರೆಗೂ ಗೋವಾ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ಆ ಬಳಿಕ 2017 ಮಾರ್ಚ್ 14 ರಂದು ಮತ್ತೆ ಗೋವಾ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು.

2013 ಲೋಕಸಭಾ ಚುನಾವಣೆಗೂ ಮುನ್ನ ಮನೋಹರ್ ಪರಿಕ್ಕರ್ ಬಿಜೆಪಿಯಿಂದ ಪ್ರಧಾನಿ ಹುದ್ದೆಯ ಅಭ್ಯರ್ಥಿಯಾಗಿಯೂ ಗುರುತಿಸಿಕೊಂಡಿದ್ದರು. ಆದರೆ 2014 ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೇಶದ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. 2017ರ ಮಾರ್ಚ್ ವರೆಗೂ ಸಚಿವರಾಗಿ ಮುಂದುವರೆದಿದ್ದರು, ಆದರೆ ಗೋವಾ ರಾಜ್ಯ ರಾಜಕೀಯದಲ್ಲಿ ನಡೆದ ಬದಲಾವಣೆಗಳ ಕಾರಣದಿಂದ ಮತ್ತೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡರು.