DAKSHINA KANNADA
ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನದ ಬಿಸ್ಕತ್ತು ಪತ್ತೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನದ ಬಿಸ್ಕತ್ತು ಪತ್ತೆ
ಮಂಗಳೂರು,ಮಾರ್ಚ್ 17: ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕತ್ತು ವಶಕ್ಕೆ ಪಡೆದಿದ್ದಾರೆ.
ದುಬೈ ನಿಂದ ಮಂಗಳೂರಿಗೆ ಆಗಮಿಸಿದ ವಿಮಾನದ ಟಾಯ್ಲೆಟ್ ನಲ್ಲಿ ಈ ಚಿನ್ನದ ಬಿಸ್ಕತ್ತು ಪತ್ತೆಯಾಗಿದೆ.
ಪತ್ತೆಯಾದ ಚಿನ್ನದ ಮೌಲ್ಯ 1.20 ಕೋಟಿ ರೂಪಾಯಿಗಳೆಂದು ಅಂದಾಜಿಸಲಾಗಿದೆ.
ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
You must be logged in to post a comment Login