Connect with us

LATEST NEWS

ಐಸ್ ಸ್ಕೇಟಿಂಗ್ ನಲ್ಲಿ ರಾಜ್ಯಕ್ಕೆ ಚಿನ್ನ ತಂದ ಅನಘಾ

ಐಸ್ ಸ್ಕೇಟಿಂಗ್ ನಲ್ಲಿ ರಾಜ್ಯಕ್ಕೆ ಚಿನ್ನ ತಂದ ಅನಘಾ

ಮಂಗಳೂರು ಮೇ 27: ದೆಹಲಿಯ ಗುರುಗ್ರಾಮ್ ನಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್‌ ಆಫ್‌ ಇಂಡಿಯಾ ಆಯೋಜಿಸಿದ ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019 ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಮಂಗಳೂರಿನ ಅನಘಾ ಚಿನ್ನದ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

8 ರಿಂದ 10 ವರ್ಷದೊಳಗಿನ ಬಾಲಕಿಯರ ವಿಭಾಗದ 500 ಮೀಟರ್ ಐಸ್ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.ಮಂಗಳೂರಿನ‌ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸಿಬಿಎಸ್ಇ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ.

ಐಸ್ ಸ್ಕೇಟಿಂಗ್ ರಾಷ್ಟ್ರೀಯ ತರಬೇತುದಾರ ಅವಧೂತ್ ಥಾವಡೆ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದು,ಮಂಗಳೂರಿನ ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯರಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ಸ್ಕೇಟಿಂಗ್ ತರಬೇತಿಯನ್ನು ಪಡೆಯುತ್ತಿದ್ದಾರೆ.

Facebook Comments

comments