LATEST NEWS
ಒಲಿಂಪಿಕ್ಸ್ ನ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ….
ಟೋಕಿಯೋ ಅಗಸ್ಟ್ 07: ಕೊನೆಗೂ ಭಾರತೀಯರ ಕನಸು ನನಸಾಗಿದ್ದು, ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಜಾವೆಲಿನ್ ನಲ್ಲಿ ನೀರಜ್ ಚೋಪ್ರಾ ಅವರು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.
ಇಂದು ನಡೆದ ಪೈನಲ್ ನಲ್ಲಿ ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನಕ್ಕೆ ಗುರಿಯಿಟ್ಟರು. ಇಲ್ಲಿಯವರೆಗೆ ಒಲಿಂಪಿಕ್ಸ್ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತ ಯಾವುದೇ ಪದಕ ಗೆದ್ದಿರಲಿಲ್ಲ. ಈಗ ನಿರಾಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
2008ರ ಬೀಜಿಂಗ್ ಒಲಿಂಪಿಕ್ಸ್ ಶೂಟಿಂಗ್ ಸ್ಪರ್ಧೆಯಲ್ಲಿ ಅಭಿನವ್ ಬಿಂದ್ರಾ ಚಿನ್ನ ಗೆದ್ದಿದ್ದರು. ಇದೀಗ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದ ಎರಡನೇ ಆಟಗಾರನಾಗಿ ನೀರಜ್ ಚೋಪ್ರಾ ಹೊರಹೊಮ್ಮಿದ್ದಾರೆ.
ನೀರಜ್ ಚೋಪ್ರಾ ಗುಂಪು ‘ಎ’ ಹಂತದ ಅರ್ಹತಾ ಸುತ್ತಿನಲ್ಲಿ 15ನೇ ಸ್ಥಾನದಲ್ಲಿದ್ದರು. ಆದರೆ ತನ್ಮ ಮೊದಲ ಪ್ರಯತ್ನದಲ್ಲಿಯೇ ನೀರಜ್ 86.59 ಮೀ. ದೂರಕ್ಕೆ ಜಾವೆಲಿನ್ ಎಸೆದು ಅಗ್ರಸ್ಥಾನ ಪಡೆದಿದ್ದರು. ಫೈನಲ್‌ನಲ್ಲೂ ಅವರು ತಮ್ಮ ಈ ಲಯವನ್ನೇ ಮುಂದುವರಿಸಲಿ ಎಂದು ಶತಕೋಟಿ ಭಾರತೀಯರು ಪ್ರಾರ್ಥಿಸಿದ್ದರು.