LATEST NEWS
ಎಮೆರ್ಜೆನ್ಸಿ ಲೈಟ್ ನಲ್ಲಿ ಚಿನ್ನ ಸಾಗಾಟಕ್ಕೆ ಯತ್ನ 9.39 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ
ಎಮೆರ್ಜೆನ್ಸಿ ಲೈಟ್ ನಲ್ಲಿ ಚಿನ್ನ ಸಾಗಾಟಕ್ಕೆ ಯತ್ನ 9.39 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ
ಮಂಗಳೂರು ಫೆಬ್ರವರಿ 13: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಕಾಸರಗೋಡು ನಿವಾಸಿ ಮುಹಮ್ಮದ್ ಮುಹೀರ್ ಪಟ್ಲ (24) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾಗ ಮುಹೀರ್ ಬಳಿಯಿದ್ದ ಎಮೆರ್ಜೆನ್ಸಿ ಲೈಟ್ ಮತ್ತು ಸೋಲಾರ್ ವಾಲ್ಲೈಟ್ನೊಳಗೆ 233.18 ಗ್ರಾಂ ತೂಕದ ಚಿನ್ನವನ್ನು ಅಡಗಿಸಿಟ್ಟಿರುವುದು ಕಂಡು ಬಂತು. ತಕ್ಷಣ ಆತನನ್ನು ಪೊಲೀಸರು ಬಂಧಿಸಿದ್ದು, ವಶಪಡಿಸಿಕೊಂಡ ಚಿನ್ನದ ಮೌಲ 9.39 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
You must be logged in to post a comment Login