LATEST NEWS
ಗುದನಾಳದಲ್ಲಿ ಚಿನ್ನ ಇಟ್ಟು ಅಕ್ರಮವಾಗಿ ಸಾಗಾಟಕ್ಕೆ ಯತ್ನ – ಆರೋಪಿ ಆರೆಸ್ಟ್

ಮಂಗಳೂರು ಜುಲೈ 2:ಗುದನಾಳದಲ್ಲಿ ಚಿನ್ನ ಇಟ್ಟು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಪ್ರಯಾಣಿಕನೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ 20.89 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನಿಂದ ಈ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ತಪಾಸಣೆ ವೇಳೆ ಆರೋಪಿಯು 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ ಗಮ್‌ನೊಂದಿಗೆ ಮಿಕ್ಸ್ ಮಾಡಿ ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
