LATEST NEWS
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ ಓರ್ವನ ಸೆರೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ ಓರ್ವನ ಸೆರೆ
ಮಂಗಳೂರು ಅಕ್ಟೋಬರ್ 10: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನಿಂದ 18.21 ಲಕ್ಷ ಮೌಲ್ಯದ 487 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಎರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದು, ಸಂಶಯದ ಮೇಲೆ ಆರೋಪಿಯನ್ನು ತಪಾಸಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಚಿನ್ನವನ್ನು ಪೇಸ್ಟ್ ರೂಪ ಕರಗಿಸಿ ತನ್ನ ದೇಹದಲ್ಲಿ ಅಡಗಿಸಿಟ್ಟುಕೊಂಡು ಅಕ್ರಮವಾಗಿ ಸಾಗಾಟಕ್ಕೆ ಪ್ರಯತ್ನಿಸಿದ್ದಾನೆ.
