LATEST NEWS
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 25.37 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ವಶ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 25.37 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ವಶ
ಮಂಗಳೂರು ಜೂನ್ 9: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟದ ಎರಡು ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಸಮಾರು 25.37 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದಿದ್ದಾರೆ. ಜೂನ್ 7 ರಂದು ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಂದ ರೂ 3.89 ಲಕ್ಷ ಮೌಲ್ಯದ 117.30 ಗ್ರಾಂ, 24 ಕ್ಯಾರೆಟ್ ಪರಿಶುದ್ದತೆಯ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಈತ ತನ್ನ ಟ್ರಾಲಿ ಸೂಟ್ ಕೇಸ್ನ ಲೋಹದ ಕವಚದೊಳಗೆ ಚಿನ್ನವನ್ನು ಅಡಗಿಸಿಟ್ಟು ತಂದಿದ್ದನು. ಇದನ್ನು ಕಸ್ಟಂ ಅಧಿಕಾರಿಗಳು ಪತ್ತೆ ಹಚ್ಚಿ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಜೂನ್ 8 ರಂದು ಕೂಡ ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಪ್ರಯಾಣಿಕನಿಂದ 21.48 ಲಕ್ಷ ರೂ ಮೌಲ್ಯದ 647 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಒಳ ಉಡುಪಿನಲ್ಲಿ ಅಡಗಿಸಿಟ್ಟು ತಂದಿದ್ದನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.