LATEST NEWS
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ ಒರ್ವನ ಬಂಧನ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ ಒರ್ವನ ಬಂಧನ
ಮಂಗಳೂರು ಜುಲೈ 13: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈಯಿಂದ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಚಿನ್ನವನ್ನು ಡಿಆರ್ ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಒರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳದ ಕಾಸರಗೋಡಿನ ನಿವಾಸಿ ಅಬೂಬಕ್ಕರ್ ಪಳ್ಳಿಕೆರೆ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಅಬೂಬಕ್ಕರ್ ಇಂದು ಮುಂಜಾನೆ ದುಬೈಯಿಂದ ಮಂಗಳೂರಿಗೆ ಬಂದಿಳಿದಿದ್ದು, ಆತನ ಲಗೇಜ್ ಸ್ಕ್ಯಾನ್ ಮಾಡುವ ಸಂದರ್ಭದಲ್ಲಿ ಸಲಾಡ್ ಮೇಕರ್ ಮತ್ತು ಸಣ್ಣ ರೆಡಿಯೋ ಒಂದರ ಟ್ರಾನ್ಸ್ ಫಾರ್ಮರ್ ನಲ್ಲಿ 697 ಗ್ರಾಂ ಚಿನ್ನವನ್ನು ಅಕ್ರಮವಾಗಿ ತಂದಿರುವುದು ಪತ್ತೆಯಾಗಿದೆ.

ಈ ಹಿನ್ನಲೆಯಲ್ಲಿ ಅಬೂಬಕ್ಕರ್ ನನ್ನು ವಶಕ್ಕೆ ಪಡೆದ ಡಿಐರ್ ಐ ಅಧಿಕಾರಿಗಳು ಆತನಿಂದ ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 21.46 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.