Connect with us

    LATEST NEWS

    ಮಂಗಳೂರು ವಿಮಾನ ನಿಲ್ದಾಣ – ಗುದದ್ವಾರದಲ್ಲಿ 1 ಕೆಜಿ ಚಿನ್ನ ಅಕ್ರಮ ಸಾಗಾಟ…!!

    ಮಂಗಳೂರು ಅಕ್ಟೋಬರ್ 11 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಗುದದ್ವಾರದಲ್ಲಿ 1 ಕೆಜಿ 53 ಗ್ರಾಂ ತೂಕದ ಚಿನ್ನವನ್ನು ಸಾಗಾಟ ಮಾಡಲು ಹೋಗಿ ಸಿಕ್ಕಿ ಬಿದ್ದಿದ್ದಾನೆ.


    ಅಬುಧಾಬಿಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನನ್ನು ಪರಿಶೀಲನೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು. 61.06 ಲಕ್ಷ ರೂ. ಮೌಲ್ಯದ ಒಟ್ಟು 1,053 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಅದನ್ನು ಗುಳಿಗೆಗಳ ಒಳಗೆ ಹಾಕಿ ಗುದದ್ವಾರದಲ್ಲಿಟ್ಟು ಸಾಗಿಸಲಾಗುತ್ತಿತ್ತು.


    ಇನ್ನೊಂದು ಪ್ರಕರಣದಲ್ಲಿ ದುಬಾಯಿಂದ ಅಕ್ರಮವಾಗಿ ಬಟ್ಟೆಯಲ್ಲಿ ಸುತ್ತಿ ಬ್ಯಾಗ್‌ನೊಳಗಿಟ್ಟು ಸಾಗಾಟ ಮಾಡುತ್ತಿದ್ದ 201 ಗ್ರಾಂ ಚಿನ್ನವನ್ನು ಪತ್ತೆ ಮಾಡಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply