LATEST NEWS
ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನದಿಂದ ಚಿನ್ನ ಕದಿದ್ದ ಅಂತರ್ ರಾಜ್ಯ ಕಳ್ಳರು ಪೊಲೀಸ್ ಬಲೆಗೆ

ಕುಂದಾಪುರ: ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಇಬ್ಬರು ಅಂತರ್ ರಾಜ್ಯ ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಮಹಾರಾಷ್ಟ್ರದ ಪುಣೆಯ ಧನರಾಜ್ ವಿಜಯ ಪರ್ ಮಾರ್ (42) ಮತ್ತು ಅಜಯ್ ಸಿಂಗ್ ಕಿಶೋರ್ ಸಾಲುಂಕ್ (23) ಎಂದು ಗುರುತಿಸಲಾಗಿದೆ. ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ರೂ 1 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನವೆಂಬರ್ 29 ರಂದು ಮಧ್ಯಾಹ್ನದ ವೇಳೆ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷನು ಗ್ರಾಹಕರ ಸೋಗಿನಲ್ಲಿ ಬಂದು 2 ಚಿನ್ನದ ಬಳೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಸಿಸಿಟಿವಿ ಫೂಟೇಜ್ ಪರಿಶೀಲನೆ ವೇಳೆ ತಿಳಿದು ಬಂದಿದೆ. ಕಳವಾದ 43 ಗ್ರಾಂ ಚಿನ್ನದ ಬಳೆಗಳ ಮೌಲ್ಯ ರೂ 2.86 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಕುರಿತು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.