Connect with us

    KARNATAKA

    ಕನ್ನಡ ಚಿತ್ರರಂಗಕ್ಕೆ ಗುಡ್‌ನ್ಯೂಸ್, ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಸರ್ಕಾರ ಅನುಮತಿ: ಕೆಲವು ಜಿಲ್ಲೆಗಳಲ್ಲಿ ಮಾತ್ರ

    ಬೆಂಗಳೂರು, ಸೆಪ್ಟೆಂಬರ್ 25: ಕೋವಿಡ್ ಎರಡನೇ ಅಲೆಯ ತೀವ್ರತೆ ತಗ್ಗಿದ್ದು, ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಸದ್ಯ ಕರ್ನಾಟಕದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ 0.66 ಇದ್ದು, ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ.

    ಹೌದು, ಕನ್ನಡ ಚಿತ್ರರಂಗಕ್ಕೆ ಇವತ್ತು ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಥಿಯೇಟರ್‌ಗಳಲ್ಲಿ ಶೇಕಡ 100 ರಷ್ಟು ಆಸನ ಭರ್ತಿಗೆ ಕರ್ನಾಟಕ ಸರ್ಕಾರ ಅಸ್ತು ಎಂದಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ಕೊರೊನಾ ಶೇ 1ಕ್ಕಿಂತಲೂ ಕಡಿಮೆ ಪ್ರಸರಣ ಇದೆಯೋ ಆ ಜಿಲ್ಲೆಗಳಲ್ಲಿ ಮಾತ್ರವೇ ಚಿತ್ರಮಂದಿರಗಳು ಪೂರ್ಣವಾಗಿ ಬಾಗಿಲು ತೆರೆಯಬಹುದಾಗಿದೆ.

    ಯಾವ ಜಿಲ್ಲೆಗಳಲ್ಲಿ ಶೇ 1ಕ್ಕಿಂತಲೂ ಹೆಚ್ಚು ಕೊರೊನಾ ಪ್ರಸರಣ ಇದೆಯೊ ಅಲ್ಲಿ 50% ಸೀಟು ಆಕ್ಯುಪೆನ್ಸಿ ನಿಯಮದಡಿಯೇ ಕಾರ್ಯ ನಿರ್ವಹಿಸಬೇಕಿದೆ. ತಜ್ಞರ ಮಂಡಳಿಯೊಂದಿಗೆ ಸಭೆ ನಡೆಸಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಈ ನಿರ್ಣಯ ತೆಗೆದುಕೊಂಡಿದ್ದಾರೆ.

    ಕೊರೊನಾ ಎರಡನೇ ಅಲೆಯಿಂದಾಗಿ ಏಪ್ರಿಲ್ 7 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳನ್ನು ಬಂದ್ ಮಾಡುವಂತೆ ಸರ್ಕಾರ ಆದೇಶ ನೀಡಿತು. ಅದಾದ ಮೇಲೆ ಹಲವು ಮನವಿಗಳ ಬಳಿಕ ಜುಲೈ 19 ರಂದು 50% ಆಸನ ವ್ಯವಸ್ಥೆ ಬಳಸಿಕೊಂಡು ಕಾರ್ಯನಿರ್ವಹಿಸುವಂತೆ ಆದೇಶ ನೀಡಲಾಯಿತು. ಅದಾದ ಬಳಿಕ ಈಗ ಅಕ್ಟೋಬರ್ 1 ರಿಂದ 100% ಅನುಮತಿ ನೀಡಲಾಗಿದೆ ಆದರೆ ಅದೂ ಕೊರೊನಾ ಸಾಂಕ್ರಾಮಿಕ ಪ್ರಮಾಣ ಕಡಿಮೆ ಇರುವ ಕಡೆಗಳಲ್ಲಿ ಮಾತ್ರ.

    ಈಗಿನ ಮಾಹಿತಿಯಂತೆ ರಾಜ್ಯದಲ್ಲಿ ಸರಾಸರಿ 0.66 ಕೋವಿಡ್ ಪ್ರಮಾಣ ಇದೆ. ಹಲವು ಜಿಲ್ಲೆಗಳಲ್ಲಿ ಶೇ 1ಕ್ಕಿಂತಲೂ ಕಡಿಮೆ ಸರಾಸರಿ ಇದೆ ಹಾಗಾಗಿ ಹಲವು ಜಿಲ್ಲೆಗಳಲ್ಲಿ ಚಿತ್ರಮಂದಿರಗಳು ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಸಿನಿಮಾಗಳನ್ನು ಪ್ರದರ್ಶಿಸಲಿವೆ.

    ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಆಸನ ಭರ್ತಿಗೆ ಅವಕಾಶ ನೀಡುವಂತೆ ಇತ್ತೀಚೆಗಷ್ಟೇ ನಿರ್ಮಾಪಕರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ರನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದೀಗ ಕನ್ನಡ ಚಿತ್ರರಂಗದವರ ಬೇಡಿಕೆ ಈಡೇರಿದೆ. ಥಿಯೇಟರ್‌ಗಳಲ್ಲಿ ಹೌಸ್‌ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಿರುವುದರಿಂದ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *