Connect with us

    DAKSHINA KANNADA

    ಶುಭ ಸುದ್ದಿ ‘ರಾಮಾಯಣ’ ಫೆ.5ರಿಂದ ದೂರದರ್ಶನದಲ್ಲಿ ಮರು ಪ್ರಸಾರ..!

    ಖ್ಯಾತ ನಿರ್ದೇಶಕ ರಮನಾಂದ ಸಾಗರ್‌ ಅವರ ನಿರ್ದೇಶನದಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು ಡಿಡಿ ನ್ಯಾಷನಲ್ ವಾಹಿನಿ ಫೆಬ್ರುವರಿ 5 ಸೋಮವಾರದಿಂದ ಮತ್ತೆ ಪ್ರಸಾರ ಮಾಡುತ್ತಿದೆ.

    ನವದೆಹಲಿ:  ವಿಶ್ವ ದಾಖಲೆ ನಿರ್ಮಿಸಿದ್ದ ರಾಮಾನಂದ ಸಾಗರ್ ಅವರು ‘ರಾಮಾಯಣ’ ಧಾರವಾಹಿ ಸೆಳೆತ ಮೂರು ದಶಕಗಳ ಬಳಿಕವೂ ಎಳ್ಳಷ್ಟೂ ಕಡಿಮೆಯಾಗಿಲ್ಲ. ಈ ಕಿರುತೆರೆ ಧಾರಾವಾಹಿ ಜಗತ್ತಿನಲ್ಲೇ ಅತ್ಯಧಿಕ ಮಂದಿ ವೀಕ್ಷಿಸಿದ ಕಾರ್ಯಕ್ರಮವಾಗಿ ವಿಶ್ವ ದಾಖಲೆ ಸೃಷ್ಟಿಸಿತ್ತು.

     

    ಖ್ಯಾತ ನಿರ್ದೇಶಕ ರಮನಾಂದ ಸಾಗರ್‌ ಅವರ ನಿರ್ದೇಶನದಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು ಡಿಡಿ ನ್ಯಾಷನಲ್ ವಾಹಿನಿ ಫೆಬ್ರುವರಿ 5 ಸೋಮವಾರದಿಂದ ಮತ್ತೆ ಪ್ರಸಾರ ಮಾಡುತ್ತಿದೆ. ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುದಿನ ಮಧ್ಯಾಹ್ನ 12 ಗಂಟೆಗೆ ಪ್ರಸಾರ ಮಾಡುವುದಾಗಿ ದೂರದರ್ಶನ ವಾಹಿನಿ ಟ್ವೀಟ್ ಮಾಡಿ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿದೆ.ಧರ್ಮ, ಪ್ರೀತಿ ಮತ್ತು ಸಮರ್ಪಣಾ ಭಾವದ ಅನನ್ಯ ಸಾಹಸಗಾಥೆ…

    ಮತ್ತೊಮ್ಮೆ ಇಡೀ ಭಾರತದ ಅತ್ಯಂತ ಜನಪ್ರಿಯ ಕಾರ್ಯಕ್ರಮ ‘ರಾಮಾಯಣ’ ಬರಲಿದೆ ಎಂದು ಡಿಡಿ ನ್ಯಾಷನಲ್‌ ಎಕ್ಸ್‌ನಲ್ಲಿ ತಿಳಿಸಿದೆ. 80 ಮತ್ತು 90 ರ ದಶಕದಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿಯಲ್ಲಿ, ಶ್ರೀರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಮತ್ತು ಸಹೋದರ ಲಕ್ಷ್ಮಣನಾಗಿ ಸುನಿಲ್ ಲಹ್ರಿ ಕಾಣಿಸಿಕೊಂಡಿದ್ದಾರೆ. ದೇಶದಾದ್ಯಂತ ಜನಮನ್ನಣೆಯನ್ನೂ ಈ ಧಾರಾವಾಹಿ ಗಳಿಸಿತ್ತು. ಕೊರೊನಾ ಲಾಕ್‌ಡೌನ್‌ ವೇಳೆಯೂ ರಾಮಾಯಣ ಧಾರಾವಾಹಿಯನ್ನು ಪ್ರಸಾರ ಮಾಡಲಾಗಿತ್ತು. ಆಗಲೂ ಲಕ್ಷಾಂತರ ಜನರು ವೀಕ್ಷಿಸಿ ಜನಪ್ರಿಯತೆ ಪಡೆದುಕೊಂಡಿತ್ತು. ಇದೀಗ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಗೊಂಡು ಲೋಕಾರ್ಪಣೆಯಾದ ಪರ್ವ ಕಾಲದಲ್ಲೇ ಈ ಅತ್ಯಧ್ಬುತ ಧಾರವಾಹಿ ಮತ್ತೊಮ್ಮೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವುದಕ್ಕೆ ಆಸ್ತಿಕ ಭಕ್ತ ಜನ ಖುಷಿಯಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply