Connect with us

BANTWAL

ಪಾಣೆಮಂಗಳೂರು – ನಿರ್ಬಂಧ ಇದ್ದರೂ ಸೇತುವೆಯಲ್ಲಿ ಬಂದು ಸಿಕ್ಕಿಹಾಕಿಕೊಂಡ ಗೂಡ್ಸ್ ವಾಹನ

ಬಂಟ್ವಾಳ ಡಿಸೆಂಬರ್ 21: ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ಹಾಕಿದ್ದರೂ ಅದನ್ನು ಲೆಕ್ಕಿಸದೇ ಸೇತುವೆಯಲ್ಲಿ ಬಂದ ಗೂಡ್ಸ್ ವಾಹನ ತಡೆಬೇಲಿಯಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.


ಸುರಕ್ಷತೆಯ ದೃಷ್ಟಿಯಿಂದ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಈ ಹಿನ್ನೆಲೆಯಲ್ಲಿ ಸೇತುವೆಯ ಮೇಲೆ ಘನ ವಾಹನ ಸಂಚಾರ ಮಾಡದಂತೆ ತಡೆಬೇಲಿ ಅಳವಡಿಸಲಾಗಿದೆ. ಇಂದು ಬೆಳಗ್ಗೆ ಶಂಭೂರು ಕಡೆಯಿಂದ ಬಂದ ಮಸಾಲೆ ಪೌಡರ್ ಸಾಗಾಟದ ಗೂಡ್ಸ್ ವಾಹನವನ್ನು ಚಾಲಕ ಸೇತುವೆ ಮೇಲೆ ತೆರಳಲು ಯತ್ನಿಸಿದ್ದಾನೆ ಈ ವೇಳೆ ವಾಹನವು ಕಬ್ಬಿಣದ ತಡೆಬೇಲಿಯಲ್ಲಿ ಸಿಲುಕಿಕೊಂಡಿದೆ.

ಘಟನೆಯಿಂದ ಚಾಲಕ ಯಾವುದೇ ಗಾಯವಿಲ್ಲದೆ ಅಪಾಯವಿಲ್ಲದೆ ಪಾರಾಗಿದ್ದಾನೆ. ಘಟನೆಯಿಂದ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನಾನುಕೂಲವಾಗಿದೆ. ಸಿಲುಕಿಕೊಂಡ ವಾಹನವನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *