Connect with us

  LATEST NEWS

  ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

  ಕೋಲ್ಕತ್ತಾ, ಜೂನ್ 17: ಸೋಮವಾರ ಬೆಳಗ್ಗೆ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲೊಂದು ಹಿಂದಿನಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅವಘಡದಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

  ಸೋಮವಾರ ಬಂಗಾಳದ ಸಿಲಿಗುರು ಎಂಬಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ರೈಲು ಕೋಲ್ಕತ್ತಾದ ಸೀಲ್ದಾಹ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ರೈಲು ಸಿಲಿಗುರಿಯ ರಂಗಪಾಣಿ ಪ್ರವೇಶಿಸುತ್ತಿದ್ದಂತೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

  ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿದ್ದು ಹಲವಾರು ಪ್ರಯಾಣಿಕರು ಗಾಯಗೊಂಡಿರುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ.

  ಅವಘಡ ಸಂಭವಿಸಿದ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಪಘಾತದ ಕುರಿತು X ನಲ್ಲಿ ಪೋಸ್ಟ್ ಹಾಕಿದ್ದು ರೈಲು ಪಘಾತದ ಸುದ್ದಿ ತಿಳಿದು ಆಘಾತವಾಗಿದೆ ಕೂಡಲೇ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಾಹಿತಿ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply