Connect with us

    KARNATAKA

    ಕರ್ನಾಟಕ ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಕ್ಕೆ ಸರ್ಕಾರ ನಿರ್ಧಾರ.!

    ಯುವ ಪೀಳಿಗೆಯ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಹುಕ್ಕಾ ಬಾರ್‌ ( Hukka bar) ಗಳನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

    ಬೆಂಗಳೂರು: ಯುವ ಪೀಳಿಗೆಯ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಹುಕ್ಕಾ ಬಾರ್‌ ಗಳನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

    ಚಿಕ್ಕ ಮಕ್ಕಳ ಮೇ ಈ ಹುಕ್ಕಾ ಬಾರ್‌ ಗಳಿಂದ ಬಹಳ ಪರಿಣಾಮ ಆಗುತ್ತಿದೆ. ಇದು ತಂಬಾಕು ಸೇವನೆಯ ಪ್ರಕ್ರಿಯೆಯಾಗಿದ್ದು ಇದಕ್ಕೆ ಅವಕಾಶ ಕೊಡದಿರಲು ಸರ್ಕಾರ ಗಂಭೀರ ನಿರ್ಧಾರ ಕೈಗೊಂಡಿದೆ.

    ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಅವರು ಮಾಹಿತಿ ನೀಡಿದ್ದು ಶೀಘ್ರವೇ ಕಾನೂನು ತರಲು ಸಭೆಯಲ್ಲಿ ಚರ್ಚೆ ಆಗಿದೆ. ಹುಕ್ಕಾಬಾರ್ ನಿಯಂತ್ರಣ ಮಾಡಲು ಸಾಧ್ಯ ಆಗುತ್ತಿಲ್ಲವಾದ್ದರಿಂದ ನಿಷೇಧಿಸಲು ಮುಂದಾಗಿದ್ದೇವೆ ಸಚಿವರು ಹೇಳಿದ್ದಾರೆ.

    ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಮಾಡುವ ಸಂಬಂಧ ಆರೋಗ್ಯ ಇಲಾಖೆ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ನಾಗೇಂದ್ರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಈಗ ಹುಕ್ಕಾ ಬಾರ್‌ ಅನ್ನು ಕಾನೂನು ವ್ಯಾಪ್ತಿಯಲ್ಲಿ ನಿಯಂತ್ರಣ ಮಾಡಲು ಮುಂದಾಗಿದ್ದೇವೆ.

    ತಂಬಾಕು ನಿಷೇಧ ವಲಯವನ್ನು ವಿಸ್ತರಣೆ ಮಾಡಲು ಮುಂದಾಗಿದ್ದೇವೆ.

    ದೇವಸ್ಥಾನ, ಚರ್ಚ್, ಮಸೀದಿ, ಆಸ್ಪತ್ರೆ ಸುತ್ತ ತಂಬಾಕು ವಸ್ತು ಮಾರಾಟಕ್ಕೆ ನಿಷೇಧ ಮಾಡಲು ತಿರ್ಮಾನ ಮಾಡುತ್ತಿದ್ದೇವೆ.

    ತಂಬಾಕು ಉತ್ಪನ್ನಗಳನ್ನು ಈಗ 18 ವರ್ಷ ಮೇಲ್ಪಟ್ಟವರು ಖರೀದಿ ಮಾಡಲು ಅವಕಾಶ ಇದೆ.

    ಅದನ್ನು 21 ವರ್ಷಕ್ಕೆ ಏರಿಕೆ ಮಾಡಲು ಚಿಂತನೆ ಮಾಡಿದ್ದೇವೆ.

    ನಾವು ಇದಕ್ಕಾಗಿ ಕಾನೂನು ಮಾಡಬೇಕಾಗುತ್ತದೆ. ಬೇರೆ ಬೇರೆ ಇಲಾಖೆಯ ಸಹಭಾಗಿತ್ವದಲ್ಲಿ ಇದನ್ನು ಮಾಡಬೇಕಾಗುತ್ತದೆ.

    ಹಾಗಾಗಿಯೇ ವಿಧೇಯಕ ತರಬೇಕಾಗುತ್ತದೆ. ತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆಯಾಗಿದೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *