DAKSHINA KANNADA
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ದ ಅವಹೇಳನಕಾರಿ ಪೋಸ್ಟ್ ಭೂಮಾಪನ ಇಲಾಖಾ ಸಿಬ್ಬಂದಿ ಆರೆಸ್ಟ್
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ದ ಅವಹೇಳನಕಾರಿ ಪೋಸ್ಟ್ ಭೂಮಾಪನ ಇಲಾಖಾ ಸಿಬ್ಬಂದಿ ಆರೆಸ್ಟ್
ಪುತ್ತೂರು ಅಗಸ್ಟ್ 16 : ಸಾಮಾಜಿಕ ಜಾಲತಾಣದಲ್ಲಿ ಪ್ರದಾನಿ ನರೇಂದ್ರ ಮೋದಿ , ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ದ ಅವಹೇಳನಕಾರಿಯಾಗಿ ಸಂದೇಶ ರವಾನಿಸಿದ ಅರೋಪದಡಿ ಕಡಬ ತಾಲೂಕು ಭೂಮಾಪನ ಇಲಾಖಾ ಸಿಬ್ಬಂದಿ ಮಹೇಶ್ ಎಂಬಾತನನ್ನು ಶುಕ್ರವಾರ ಕಡಬ ಪೊಲೀಸರು ಬಂಧಿಸಿದ್ದಾರೆ.
ಕಡಬದ ಹಿಂದೂ ಮುಖಂಡರು ಕಡಬ ಪೊಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ದ ದೂರು ನೀಡಿದರು. ಕೀಳು ಮಟ್ಟದ ಪದ ಬಳಕೆ ಮಾಡಿ ಅವಹೇಳಕಾರಿ ಸಂದೇಶವನ್ನು ತನ್ನ ಸಾಮಾಜಿಕ ಜಾಲತಾಣದ ಸ್ಟೇಟಸ್‍ನಲ್ಲಿ ಹಾಕಿಕೊಂಡಿದ್ದ ಆರೋಪಿ ಮಹೇಶ್ ಕಳೆದ ಹಲವು ದಿನಗಳಿಂದ ತಾನು ಓರ್ವ ಸರಕಾರಿ ಉದ್ಯೋಗಿ ಎನ್ನುವುದನ್ನು ಕೂಡ ಮರೆತು ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ , ಆರೆಸೆಸ್ಸ್ ವಿರುದ್ದ ಅವಹೇಳನಕಾರಿ ಸಂದೇಶಗಳನ್ನು ತನ್ನ ಫೇಸ್‍ಬುಕ್ ಖಾತೆ ಹಾಗೂ ವಾಟ್ಸಾಪ್ , ಸ್ಟೇಟಸ್ ಗಳಲ್ಲಿ ಹಾಕಿಕೊಳ್ಳುತ್ತಿದ್ದ.
ಈ ಹಿನ್ನಲೆಯಲ್ಲಿ ಆರೋಪಿ ಮಹೇಶ್‍ನನ್ನು ಸೇವೆಯಿಂದ ವಜಾಗೊಳಿಸಿ ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿ ಹಿಂದೂ ಸಂಘಟನೆಯ ಮುಖಂಡರಾದ ವೆಂಕಟ್ರಮಣ ಕೋಡಿಂಬಾಳ ಆಗ್ರಹಿಸಿದ್ದರು. ಅಲ್ಲದೆ ಕಾನೂನು ಕ್ರಮ ಕೈಗೊಳ್ಳಲು ತಪ್ಪಿದಲ್ಲಿ ಕಡಬ ತಾಲೂಕು ಬಂದ್‍ಗೆ ಕರೆ ನೀಡಿ ಉಗ್ರ ರೀತಿಯ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದರು.ಈ ಹಿನ್ನಲೆಯಲ್ಲಿ ಇಂದು ಕಡಬ ಪೊಲೀಸರು ಭೂಮಾಪನ ಇಲಾಖಾ ಸಿಬ್ಬಂದಿ ಮಹೇಶ್ ನ್ನು ಬಂಧಿಸಿದ್ದಾರೆ.