Connect with us

UDUPI

ಗೃಹಜ್ಯೋತಿ ಯೋಜನೆಯಿಂದ ಉಡುಪಿ ಜಿಲ್ಲೆಯ 3.15 ಲಕ್ಷ ಜನರಿಗೆ ಪ್ರಯೋಜನ – ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ಆಗಸ್ಟ್ 6 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಿಂದ ಉಡುಪಿ ಜಿಲ್ಲೆಯ 3,15,692 ಜನರಿಗೆ ಪ್ರಯೋಜನ ದೊರೆಯಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ಕುಂಜಿಬೆಟ್ಟು ಕ.ವಿ.ಪ್ರ.ನಿ.ನಿ ನೌಕರರ ಸಂಘದ ಸಭಾಭವನದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.


ರಾಜ್ಯದಲ್ಲಿನ ಎಲ್ಲಾ ಭಾಷೆ, ಜಾತಿ, ಧರ್ಮದವರ ಶ್ರೇಯೋಭಿವೃದ್ಧಿಗಾಗಿ ಚುನಾವಣೆಗೂ ಮುನ್ನ ಸರ್ಕಾರ ಘೋಷಿಸಿದ್ದ ಐದು ಯೋಜನೆಗಳಲ್ಲಿ, ಗೃಹಜ್ಯೋತಿ ಯೋಜನೆ ಆರಂಭದ ನಂತರ, ಮೂರು ಯೋಜನೆಗಳು ಕೇವಲ ಮೂರು ತಿಂಗಳಲ್ಲಿ ಜಾರಿಯಾದಂತಾಗಿದೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಸರ್ವರಿಗೂ ಸಮ ಪಾಲು ಸಮ ಬಾಳು ಎಂಬ ತತ್ವದಡಿಯಲ್ಲಿ ರಾಜ್ಯವನ್ನು ಪ್ರಗತಿಯುತ್ತ ಮುನ್ನೆಡೆಸುತ್ತಿದೆ ಎಂದರು.
ರಾಜ್ಯದಲ್ಲಿ ಈಗಾಗಲೇ ಶಕ್ತಿ, ಅನ್ನಭಾಗ್ಯ ಯೋಜನೆ ಜಾರಿಯಾಗಿದೆ. ಈಗ ಗೃಹಜ್ಯೋತಿ ಆರಂಭವಾಗಿದೆ. ಇದೇ ಆಗಸ್ಟ್ 18 ಅಥವಾ 20 ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶದ ಮೂಲಕ ಗೃಹಲಕ್ಷ್ಮೀ ಯೋಜನೆ ಜಾರಿಯಾಗಲಿದೆ. ಬೆಲೆ ಏರಿಕೆಯಿಂದಾಗಿ ತತ್ತರಿಸಿ ಹೋಗಿದ್ದ ಜನರಿಗೆ ಭರವಸೆ ತುಂಬುವುದಕ್ಕಾಗಿ ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಘೋಷಣೆ ಮಾಡಿತು ಎಂದರು.


ರಾಜ್ಯದ 1.42 ಕೋಟಿ ಗ್ರಾಹಕರು ಗೃಹಜ್ಯೋತಿ, 1.28 ಕೋಟಿ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಪ್ರಯೋಜನ ಪಡೆಯಲಿದ್ದು, ಶಕ್ತಿಯೋಜನೆಯಡಿ ಇದುವರೆಗೆ 30 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಗೃಹ ಲಕ್ಷ್ಮೀ ಯೋಜನೆಯಡಿ 1.28 ಕೋಟಿ ಕುಟುಂಬಗಳಿಗೆ ಡಿಬಿಟಿ ಮೂಲಕ ಪ್ರತೀ ತಿಂಗಳು ರೂ.2000 ನೀಡಲಿದ್ದು, ಇದಕ್ಕಾಗಿ ಇದುವರೆಗೆ 1 ಕೋಟಿ ಕುಟುಂಬಗಳ ಮಹಿಳೆಯರು ನೊಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 3,15,692 ಗ್ರಾಹಕರಿದ್ದು, ಈ ಪೈಕಿ ಶೇ.80 ರಷ್ಟು ಅಂದರೆ 2,69,949 ಗ್ರಾಹಕರು ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊAಡಿದ್ದಾರೆ. ನಮ್ಮ ಸರ್ಕಾರದಿಂದ ರಾಜ್ಯ ಸುಭದ್ರ ಮತ್ತು ಪ್ರಗತಿಪಥ ದತ್ತ ಮುನ್ನಡೆಯಲಿದೆ ಎಂದರು. ಶಾಸಕ ಯಶ್‌ಪಾಲ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಸಚಿವರು ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಉಚಿತ ಬಿಲ್‌ನ ದೃಢೀಕರಣ ಪತ್ರ ವಿತರಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *