Connect with us

    DAKSHINA KANNADA

    ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ನಾಪತ್ತೆ….!!

    ಸುಬ್ರಹ್ಮಣ್ಯ ಅಕ್ಟೋಬರ್ 31: ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯೆಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್‌ ಎಂಬವರ ಪತ್ನಿ ಭಾರತಿ ಮೂಕಮಲೆ (33) ಅವರು ಅಕ್ಟೋಬರ್ 29ರಂದು ಕಾಣೆಯಾಗಿದ್ದಾರೆ. ಈ ಬಗ್ಗೆ ಭಾರತಿ ಅವರ ಪತಿ ದೂರು ನೀಡಿದ್ದಾರೆ.


    ಅಕ್ಟೋಬರ್ 29 ರಂದು ಸಂಜೆ ಮನೆಗೆ ಬಂದಾಗ ಭಾರತಿ ಮನೆಯಲ್ಲಿ ಇರಲಿಲ್ಲ, ಮಕ್ಕಳಲ್ಲಿ ವಿಚಾರಿಸಿದಾಗ ಅವರು ಎಲ್ಲಿಯೋ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾಳೆ ಎಂದು ತಿಳಿಸಿದ್ದು, ಬಳಿಕ ಪತ್ನಿಗೆ ಕರೆ ಮಾಡಿದಾಗ ಫೋನ್‌ ಸ್ವೀಚ್‌ ಆಫ್‌ ಆಗಿತ್ತು, ಈ ಬಗ್ಗೆ ಸಂಬಂಧಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಿದಾಗ ಎಲ್ಲಿಯೂ ಸಿಗಲಿಲ್ಲ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply