LATEST NEWS
ಲಂಚ ಸ್ವೀಕಾರದ ಆರೋಪ ಸಾಭೀತು ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ಜೈಲು
ಲಂಚ ಸ್ವೀಕಾರದ ಆರೋಪ ಸಾಭೀತು ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ಜೈಲು
ಮಂಗಳೂರು ಅಗಸ್ಟ್ 25: ಲಂಚ ಸ್ವೀಕಾರದ ಆರೋಪ ಸಾಭೀತಾದ ಹಿನ್ನಲೆ ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ಶಿಕ್ಷೆ ವಿಧಿಸಿ ಮಂಗಳೂರು ಲೋಕಾಯುಕ್ತ ಕೋರ್ಟ್ ಆದೇಶಿಸಿದೆ.
2010ರಲ್ಲಿ ಈ ಪ್ರಕರಣ ನಡೆದಿದ್ದು, 8 ವರ್ಷಗಳ ನಂತರ ಆರೋಪಿಗೆ ಶಿಕ್ಷೆಯಾಗಿದೆ. ಸೋಮೇಶ್ವರ ಗ್ರಾಮಪಂಚಾಯತ್ ನ ಕಾರ್ಯದರ್ಶಿಯಾಗಿದ್ದ ಎ. ಸುರೇಶ್ ಕುಮಾರ್ ಅವರು ಅಂಗಡಿ ಪರವಾನಗಿ ವರ್ಗಾವಣೆ ಮಾಡಲು ಬಿ ಎಮ್ ಎ ಜಲೀಲ್ ಎಂಬವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ದಿನಾಂಕ 17-09-2010ರಂದು ರೂ. 6,000/- ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.
ಮಂಗಳೂರು ಲೋಕಾಯುಕ್ತ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆದು ಲಂಚ ಸ್ವೀಕಾರದ ಆರೋಪ ಸಾಭೀತಾಗಿತ್ತು. ಈ ಹಿನ್ನಲೆಯಲ್ಲಿ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ. ಮುರಳಿಧರ ಪೈ ಅವರು ಕಲಂ 7 ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ 1 ವರ್ಷ ಸಾದಾ ಸಜೆ ಮತ್ತು 10,000/- ದಂಡ. ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 1 ವರ್ಷ ಸಾದಾ ಸಜೆ ಮತ್ತು 10,000/- ದಂಡ ವಿಧಿಸಿ ಆದೇಶಿಸಿದ್ದಾರೆ.
ಪ್ರಸ್ತುತ ಆರೋಪಿ ಸರಕಾರಿ ಕೆಲಸದಿಂದ ನಿವೃತ್ತರಾಗಿದ್ದು, ಈಗ ಅವರಿಗೆ 66 ವರ್ಷ ವಯಸ್ಸಾಗಿದೆ. ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಉದಯ ಎಮ್. ನಾಯಕ್ ಅವರ ನೇತೃತ್ವದದಲ್ಲಿ ಆರೋಪಿಯನ್ನು ಬಂದಿಸಲಾಗಿತ್ತು. ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.