Connect with us

FILM

ಚಿತ್ರರಂಗಕ್ಕೆ ವಜ್ರಮುನಿ ಮೊಮ್ಮಗ ಸಿನೆಮಾರಂಗಕ್ಕೆ ಗ್ರ್ಯಾಂಡ್ ಎಂಟ್ರಿ..!

ಬೆಂಗಳೂರು, ಮಾರ್ಚ್ 29: ಕನ್ನಡದ ಖ್ಯಾತ ನಟ ಕೋಮಲ್ ಕುಮಾರ್ ಮೊಟ್ಟಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸುತ್ತಿರುವ “ಯಲಾ ಕುನ್ನಿ” ಚಿತ್ರದ ಮುಹೂರ್ತ ಸಮಾರಂಭ ವಿಜಯನಗರದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರಕ್ಕೆ ಕನ್ನಡ ಚಿತ್ರರಂಗದ ದಂತಕಥೆ ವಜ್ರಮುನಿ ರವರ ಕುಟುಂಬದ ಎಲ್ಲ ಸದಸ್ಯರು ಆಗಮಿಸಿ ಚಿತ್ರಕ್ಕೆ ಶುಭ ಕೋರಿದ್ದು ವಿಶೇಷವಾಗಿತ್ತು.

ವಜ್ರಮುನಿರವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀ ವಜ್ರಮುನಿ ಕ್ಯಾಮರಾ ಚಾಲನೆ ಮಾಡಿದರೆ, ಮೊದಲ ಸನ್ನಿವೇಶಕ್ಕೆ ವಜ್ರಮುನಿ ಅವರ ಹಿರಿಯ ಪುತ್ರ ವಿಶ್ವನಾಥ್ ಆರಂಭಫಲಕ ತೋರಿದರು, ವಜ್ರಮುನಿ ಯವರ ಕಿರಿಯ ಪುತ್ರ ಜಗದೀಶ್ ವಜ್ರಮುನಿ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಆನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನನ್ನ ಮೊಮ್ಮಗ ಆಕರ್ಶ್ ಈ ಚಿತ್ರದಲ್ಲಿ ಕೋಮಲ್ ಅವರ ಮಗನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾನೆ. ಅವನಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ಶ್ರೀಮತಿ ಲಕ್ಷ್ಮೀ ವಜ್ರಮುನಿ. “ಯಲಾಕುನ್ನಿ” ಖ್ಯಾತ ನಟ ವಜ್ರಮುನಿ ಅವರ ಚಿತ್ರಗಳಲ್ಲಿ ಹೆಚ್ಚಾಗಿ ಬಳಸುತ್ತಿದ್ದ ಪದ. ಈಗ ಆ ಪದವೇ ಚಿತ್ರದ ಶೀರ್ಷಿಕೆಯಾಗಿದೆ. “ಮೇರಾ ನಾಮ್ ವಜ್ರಮುನಿ..!” ಎಂಬ ಅಡಿಬರಹ ಕೂಡ ಇದೆ.

ನಾನು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕ ಪ್ರದೀಪ್ ಬಹಳ ಚೆನ್ನಾಗಿ ಕಥೆ , ಚಿತ್ರಕಥೆ , ಸಂಭಾಷಣೆ ಬರೆದಿದ್ದಾರೆ. ಚಿತ್ರದ ಮುಕ್ಕಾಲು ಭಾಗ 1981 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶ್ರೀರಂಗಪಟ್ಟಣ, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಗಂಜಾಂ ಬಳಿ ಪುರಾತನ ದೇವಾಲಯವಿದ್ದು, ಆ ದೇವಾಲಯದಲ್ಲೇ ಹೆಚ್ಚಿನ ಚಿತ್ರೀಕರಣವಾಗಲಿದೆ. ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗುವುದು ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದು ನಾಯಕ ಕೋಮಲ್ ಕುಮಾರ್ ತಿಳಿಸಿದರು.

ನಾನು ಕನ್ನಡದ ಹಿರಿಯ ನಿರ್ದೇಶಕರ ಬಳಿ ಕೆಲಸ ಮಾಡಿದ್ದೀನಿ . ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಈ ಹಿಂದೆ “ಸಡಗರ” ಚಿತ್ರ ನಿರ್ಮಿಸಿದ್ದ ಮಹೇಶ್ ಗೌಡ್ರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಮತ್ತೊಂದು ವಿಶೇಷವೆಂದರೆ ವಜ್ರಮುನಿ ಯವರ ಮೊಮ್ಮಗ ಆಕರ್ಶ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಹೊಸ ಪ್ರತಿಭೆ ನಿಸರ್ಗ ಈ ಚಿತ್ರದ ನಾಯಕಿ.‌ ಯತಿರಾಜ್ ಜಗ್ಗೇಶ್, ಫ್ರೆಂಚ್ ಬಿರಿಯಾನಿ ಮಹಾಂತೇಶ್ ಇನ್ನು ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಧರ್ಮವಿಶ್ ಸಂಗೀತ ‌ನಿರ್ದೇಶನ ಹಾಗೂ ಉದಯ್ ಲೀಲಾ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ , ವಿನೋದ್ ರವರ ಸಾಹಸ ಈ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಕೋಮಲ್ ಕುಮಾರ್ ವಜ್ರಮುನಿಯಾದರೆ, ಅವರ ಬಲಗೈ ಬಂಟನಾಗಿ ಜಯಸಿಂಹ ಮುಸುರಿ “ಕನೆಕ್ಷನ್ ಕಾಳಪ್ಪ” ನಾಗಿ ಕಾಣಿಸಿ ಕೊಳ್ಳಲಿದ್ದಾರೆ. ಚಿತ್ರದ ಹಿನ್ನಲೆ ಗೋವಿನ ಹಾಡಿನಲ್ಲಿ ಬರುವ ವ್ಯಾಘ್ರ ಹುಲಿ ಅರ್ಭುತ ಮತ್ತು ಸತ್ಯವೇ ಭಗವಂತನೆಂದ ಪುಣ್ಯಕೋಟಿಯ ಕಥೆಯಿಂದ ಪ್ರೇರಿತವಾಗಿದೆ. ಏಪ್ರಿಲ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಪ್ರದೀಪ್ ತಿಳಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *