DAKSHINA KANNADA
ವಿಟ್ಲ – ನಾಲ್ವರು ದುಷ್ಕರ್ಮಿಗಳಿಂದ ಯುವಕನ ಮೇಲೆ ಹಲ್ಲೆ

ವಿಟ್ಲ ಜುಲೈ 4: ಯುವಕನೊಬ್ಬನಿಗೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡ ಯುವಕನನ್ನು ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಎಂದು ಗುರುತಿಸಲಾಗಿದ್ದು, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.ಈ ಕುರಿತಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರೀಸ್ ದೂರು ನೀಡಿದ್ದಾರೆ.

ಕೆಲ ಸಮಯದ ಹಿಂದೆ ಅವಿನಾಶನ ತಂಗಿಗೆ ಕೀಟಲೆ ಮಾಡಿದ್ದಾನೆ ಎಂದು ಹಾರೀಸ್ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪೂರ್ವ ದ್ವೇಷದಿಂದ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.