Connect with us

    KARNATAKA

    ಸಂಬಳ ಏರಿಕೆ ಬೆನ್ನಲ್ಲೆ ಅತಿಥಿ ಉಪನ್ಯಾಸಕರ ನೇಮಕಾತಿಗೆ 30 ಸಾವಿರಕ್ಕೂ ಅಧಿಕ ಅರ್ಜಿ

    ಬೆಂಗಳೂರು ಜನವರಿ 21: ಅತಿಥಿ ಉಪನ್ಯಾಸಕರ ಗೌರವಧನವನ್ನು ಏರಿಕೆ ಮಾಡಿ ಸರಕಾರ ಆದೇಶ ಹೊರಡಿಸಿದ ಬೆನ್ನಲ್ಲೆ ನೇಮಕ ಪ್ರಕ್ರಿಯೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆ ಇಲ್ಲಿಯವರೆಗೆ 30 ಸಾವಿರಕ್ಕೂ ಅಧಿಕ ಅರ್ಜಿ ಬಂದಿದೆ.


    ಈ ಬಗ್ಗೆ ಮಾಹಿತಿ ನೀಡಿರುವ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಅರ್ಜಿ ಸಲ್ಲಿಕೆಗೆ ಜನವರಿ 17ರಿಂದ ಅವಕಾಶ ನೀಡಲಾಗಿತ್ತು. ಗುರುವಾರ (ಜ.20) ವೇಳೆಗೆ 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಹಾಕಿಕೊಂಡಿದ್ದಾರೆ.
    ರಾಜ್ಯ ಸರ್ಕಾರವು ಇತ್ತೀಚೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಬಳವನ್ನು ಎರಡೂವರೆ ಪಟ್ಟಿಗಿಂತ ಹೆಚ್ಚು ಏರಿಸಿದೆ. ಇದು ಅರ್ಹ ಅಭ್ಯರ್ಥಿಗಳಲ್ಲಿ ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡಿದೆ ಎನ್ನುವುದಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಅರ್ಜಿಗಳು ಬಂದಿರುವುದೇ ಸಾಕ್ಷಿ’ ಎಂದಿದ್ದಾರೆ.

    ಅಲ್ಲದೆ, ಅರ್ಜಿ ಹಾಕಿಕೊಳ್ಳಲು ಶುಕ್ರವಾರ (ಜ.21) ಮಧ್ಯರಾತ್ರಿ 12 ಗಂಟೆಯವರೆಗೂ ಅವಕಾಶವಿದೆ. ಇದುವರೆಗೂ ಅರ್ಜಿ ಹಾಕದೆ ಇರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. https://dce.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply