Connect with us

    LATEST NEWS

    ಮಂಗಳೂರು – ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕಿ

    ಮಂಗಳೂರು : ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಮೂಲ್ಕಿ ಸಮೀಪದ ಎಸ್ ಕೋಡಿ ಎಂಬಲ್ಲಿ ನಡೆದಿದೆ.


    ಮೃತರನ್ನು ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ. ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ .ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    ಮೃತರು ಪತಿ ಹಾಗೂ ಎಂಟು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಬಂಟ್ವಾಳ ಮೂಲದ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ಪುತ್ರಿಯಾಗಿದ್ದರು. ಅತ್ಯಂತ ಕ್ರಿಯಾಶೀಲ ಮಹಿಳೆಯಾಗಿದ್ದು, ಇವರು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅಮಿತಾ ಅವರದು ಲವ್ ಮ್ಯಾರೇಜ್ ಆಗಿದ್ದರು. ಸೋಮವಾರದಂದು ಕಾಲೇಜಿಗೆ ಆಗಮಿಸಿದ್ದ ಅಮಿತ ಸಂಜೆ ವೇಳೆ ಗಂಡನ ಮನೆಗೆ ತೆರಳಿದ್ದರು. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

     

    Share Information
    Advertisement
    Click to comment

    You must be logged in to post a comment Login

    Leave a Reply