Connect with us

    LATEST NEWS

    ಗುರುಪುರ ಗುಡ್ಡ ಕುಸಿತ ಪ್ರಕರಣ ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ವಿತರಣೆ

    ಮಂಗಳೂರು ಜುಲೈ 6:ನಿನ್ನೆ ಮಂಗಳೂರು ತಾಲೂಕಿನ ಗುರುಪುರದ ಬಂಗ್ಲೆಗುಡ್ಡೆಯಲ್ಲಿ ಗುಡ್ಡ ಕುಸಿದು ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ದಕ್ಷಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಿದ್ದಾರೆ.


    ನಿನ್ನೆ ಘಟನೆ ನಡೆದ ಬಳಿಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಗಳ ಪರಿಹಾರಧನವನ್ನು ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದು ಪರಿಹಾರ ಧನವನ್ನು ವಿತರಣೆ ಮಾಡಲಾಗಿದೆ. ಮೂಲ್ಕಿ ಮೂಡುಬಿದಿರೆ ಕ್ಷೇತ್ರ ಶಾಸಕ ಉಮಾನಾಥ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply