Connect with us

LATEST NEWS

ಅಪಾಯಮಟ್ಟದಲ್ಲಿ ಗುರುಪುರ ಫಲ್ಗುಣಿ ನದಿ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಸೂಚನೆ

ಅಪಾಯಮಟ್ಟದಲ್ಲಿ ಗುರುಪುರ ಫಲ್ಗುಣಿ ನದಿ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಅಗಸ್ಟ್ 10 : ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಗುರುಪುರ ಫಲ್ಗುಣಿ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಈ ಹಿನ್ನಲೆಯಲ್ಲಿ ನದೀ ಪಾತ್ರದಲ್ಲಿ ವಾಸಿಸುತ್ತಿರುವ ಎಲ್ಲಾ ನಾಗರೀಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ.

ಈಗಾಗಲೇ ನದಿ ತೀರದ ಪ್ರಮುಖ ಸಂಭಾವ್ಯ ಅಪಾಯ ಸ್ಥಳಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಗುರುಪುರ- ಫಲ್ಗುಣಿ ನದಿ ತೀರದ ಎರಡೂ ಬದಿಗಳ ಸಮೀಪದ ಪ್ರದೇಶಗಳಲ್ಲಿ ವಾಸಿಸುವ ನಾಗರೀಕರು ತಕ್ಷಣವೇ ತಮ್ಮ ಕುಟುಂಬದೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Facebook Comments

comments