LATEST NEWS
ನಮ್ಮ ಜೀವಿತದಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆಯಾಗುತ್ತಿರುವುದು ನಮ್ಮ ಸೌಭಾಗ್ಯ – ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ

ಮಂಗಳೂರು ಅಗಸ್ಟ್ 3: ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯುತ್ತಿರುವುದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾತನಾಡಿದ ಅವರು ನಾವು ನೈಜ ಪುಣ್ಯವಂತರು. ನಮ್ಮ ಜೀವಿತದಲ್ಲಿ ರಾಮಂದಿರಕ್ಕೆ ಭೂಮಿಪೂಜೆ ಯಾಗುತ್ತಿರುವುದು ನಮ್ಮ ಸೌಭಾಗ್ಯ. ಅಯೋಧ್ಯೆ ಮೋಕ್ಷದಾಯಕ ಕ್ಷೇತ್ರ. ಅಂತಹಾ ಪುಣ್ಯಕ್ಷೇತ್ರದಲ್ಲಿ ಶ್ರೀ ರಾಮನ ಮಂದಿರದ ಭೂಮಿ ಪೂಜೆ ನಡೆಯುತ್ತಿದೆ. ಇದು ನಮ್ಮ ಪುಣ್ಯ ಎಂದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ. ರಾಮ ಮಂದಿರ ಭೂಮಿಪೂಜೆಯ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
