Connect with us

    DAKSHINA KANNADA

    ಕಟೀಲು ಮೇಳದ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ರಂಗಸ್ಥಳದಲ್ಲಿ ನಿಧನ

    ಮಂಗಳೂರು, ಡಿಸೆಂಬರ್ 23: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು.

    ಸರಸ್ವತೀ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ತ್ರಿಜನ್ಮ ಮೋಕ್ಷ ಪ್ರಸಂಗ. ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ರಂಗಸ್ಥಳದಿಂದ ಕೆಳಗಡೆ ಬಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ನಿಧನರಾದರೆಂದು ಘೋಷಿಸಲಾಯಿತು.

    ಅಷ್ಟಮಂಗಲ ಪ್ರಸಂಗವನ್ನೂ ಬರೆದಿದ್ದ ಅವರು ಕಳೆದ ಮಳೆಗಾಲದಲ್ಲಿ ಮಂಗಳೂರು ಪುರಭವನದಲ್ಲಿ ಯಕ್ಷಗಾನವನ್ನು ಆಡಿಸಿದ್ದರು. ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಅವರು 2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು. ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದ ಅವರಿಗೆ ಅನೇಕ ಕಡೆ ಸಂಮಾನಗಳು ಸಂದಿವೆ.

    Share Information
    Advertisement
    Click to comment

    You must be logged in to post a comment Login

    Leave a Reply