Connect with us

    FILM

    ಕರ್ನಾಟಕದಲ್ಲಿ ಹಮಾರೆ ಬಾರಾಹ್ ಹಿಂದಿ ಸಿನೆಮಾ ಬ್ಯಾನ್

    ಬೆಂಗಳೂರು ಜೂನ್ 07: ಬಾರೀ ವಿವಾದಕ್ಕೆ ಕಾರಣವಾಗಿರುವ ಹಮಾರೆ ಬಾರಹ್ ಹಿಂದಿ ಸಿನಿಮಾ ಹಾಗೂ ಟ್ರೇಲರ್ ಅನ್ನು ಎರಡು ವಾರಗಳ ಅವಧಿ ಅಥವಾ ಮುಂದಿನ ಆದೇಶದವರೆಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


    ಹಮಾರೆ ಬಾರಹ್’ ಚಲನಚಿತ್ರವನ್ನು ಬಿಡುಗಡೆಗೆ ಅನುಮತಿ ಕೊಟ್ಟಲ್ಲಿ ರಾಜ್ಯದಲ್ಲಿ ಶಾಂತಿಗೆ ಭಂಗವುಂಟು ಮಾಡುವ ಹಾಗೂ ಜಾತಿ ಜಾತಿಗಳ ಮಧ್ಯೆ ದ್ವೇಷವುಂಟು ಮಾಡುವ, ಒಂದು ಧರ್ಮದ ಪದ್ಧತಿಗಳನ್ನು ಉದ್ದೇಶಪೂರ್ವಕವಾಗಿ ಅವಹೇಳನ ಮಾಡಿ ಧರ್ಮಗಳ ಮಧ್ಯೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಅಥವಾ ಸೌಹಾರ್ದತೆ ಹದಗೆಡಲು ಕಾರಣವಾಗುವ ಸಾಧ್ಯತೆಯ ಬಗ್ಗೆ ಹಾಗೂ ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವಂತೆ ಬಿಂಬಿತವಾಗಿರುವ ಸನ್ನಿವೇಶಗಳು ಕಂಡುಬಂದಿರುತ್ತವೆ’ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply