LATEST NEWS
ಜೂನ್ 28 ರಂದು ಹರೇಕಳ ನಡೆದಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯವಕ ಸಾವು

ಕೊಣಾಜೆ, ಜುಲೈ 2: ಜೂನ್ 28 ರಂದು ಹರೇಕಳ ಸಮೀಪ ನಡೆದಿದ್ದ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಗಣೇಶ್ ಆಚಾರ್ಯ ( 27) ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗಣೇಶ್ ಜೂ.28 ರಂದು ಬೆಳಗ್ಗೆ ಹರೇಕಳ ಕಡೆಯಿಂದ ಕೊಣಾಜೆ ಮಾರ್ಗವಾಗಿ ಹೋಗುವ ಸಂದರ್ಭ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿದೆ. ಟಿಪ್ಪರ್ ಚಾಲಕನ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಟಿಪ್ಪರ್ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನಲ್ಲಿ ಎಸಿ ಮೆಕ್ಯಾನಿಕ್ ಆಗಿ ದುಡಿಯುತ್ತಿದ್ದ ಗಣೇಶ್, ಮನೆಯ ಹಿರಿಯ ಪುತ್ರನಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
