Connect with us

FILM

ಹರಿಪ್ರಿಯಾ ವಸಿಷ್ಠ ಸಿಂಹ ಡೇಟಿಂಗ್ – ದುಬೈನಲ್ಲಿ ಕಾಣಿಸಿಕೊಂಡ ಜೋಡಿಗಳು…!!

ಬೆಂಗಳೂರು ನವೆಂಬರ್ 29: ಸ್ಯಾಂಡಲ್ ವುಡ್ ನಲ್ಲಿ ಇದೀಗ ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಮದುವೆ ವಿಚಾರ ಸುದ್ದಿಯಲ್ಲಿದ್ದು, ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಅದಕ್ಕೆ ಪುಷ್ಠಿ ನೀಡುವಂತೆ ಇಬ್ಬರು ದುಬೈನಲ್ಲಿ ಕಾಣಿಸಿಕೊಂಡಿದ್ದಾರೆ.


ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ. ಆದರೆ ಈ ಜೋಡಿ ದುಬೈ ವಿಮಾನ ನಿಲ್ದಾಣದಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕೈ ಕೈ ಹಿಡಿದು ಸಾಗಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಶಾಪಿಂಗ್​ಗಾಗಿ ದುಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ತೆಲುಗಿನ ‘ಎವರು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಇನ್ನೂ ಬಿಡುಗಡೆ ಆಗಬೇಕಿದೆ. ಈ ಸಿನಿಮಾದಲ್ಲೇ ಇವರಿಬ್ಬರೂ ಪರಸ್ಪರ  ಅರ್ಥ ಮಾಡಿಕೊಂಡರು ಎಂದು ಹೇಳಲಾಗುತ್ತಿದೆ. ಅಲ್ಲದೇ, ಗೆಳೆತನ ಗಟ್ಟಿಯಾಗಿ ಆ ನಂತರವಷ್ಟೇ ಮದುವೆ ಆಗುವ ನಿರ್ಧಾರವನ್ನು ತಗೆದುಕೊಂಡಿದ್ದಾರೆ ಎನ್ನುತ್ತಾರೆ ಆಪ್ತರು. ಮದುವೆ ಕುರಿತಾಗಿ ಇಷ್ಟೊಂದು ಸುದ್ದಿಯಾದರೂ, ವಸಿಷ್ಠ ಆಗಲಿ ಅಥವಾ ಹರಿಪ್ರಿಯಾ ಆಗಲಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Advertisement
Click to comment

You must be logged in to post a comment Login

Leave a Reply