BELTHANGADI
ಇಂದಿನಿಂದ ಧರ್ಮಸ್ಥಳ ಪ್ರಕರಣದ ಎಸ್ಐಟಿ ತನಿಖೆ ಪ್ರಾರಂಭ ಸಾಧ್ಯತೆ

ಬೆಳ್ತಂಗಡಿ ಜುಲೈ 23: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿರುವ ಬಗ್ಗೆ ಅನಾಮಿಕ ವ್ಯಕ್ತಿಯೊಬ್ಬ ನೀಡಿರುವ ದೂರಿನ ತನಿಖೆಯನ್ನು ಎಸ್ ಐಟಿ ಇಂದು ಪ್ರಾರಂಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಧರ್ಮಸ್ಥಳ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಇಂದಿನಿಂದ ತನಿಖಾ ತಂಡ ಅಖಾಡಕ್ಕೆ ಇಳಿಯಲಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ.

ಈ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ ತನಿಖೆ ನಡೆಸಲಿದೆ. ಮೊದಲಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಲಿರೋ ಎಸ್‌ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ, ಧರ್ಮಸ್ಥಳ ಪೊಲೀಸ್ ಇನ್ಸ್‌ಪೆಕ್ಟರ್ ಜೊತೆ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ. ಬಳಿಕ ಅಧಿಕೃತವಾಗಿ ಪ್ರಕರಣ ಎಸ್‌ಐಟಿಗೆ ಹಸ್ತಾಂತರವಾಗಲಿದೆ. ಪ್ರಕರಣ ತನಿಖೆಯು ಎಸ್‌ಐಟಿಗೆ ಸವಾಲಿಗೆ ಕೆಲಸವಾಗಲಿದೆ. ಹಲವು ಆಯಾಮಗಳನ್ನು ತನಿಖೆ ನಡೆಸಲಿದ್ದು, ಇದಕ್ಕಾಗಿ ಪ್ರಣವ್ ಮೊಹಾಂತಿ ನೇತೃತ್ವದ ಎಸ್ಐಟಿ ತಂಡಕ್ಕೆ 20 ಮಂದಿ ಅಧಿಕಾರಿ, ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.